ಉತ್ತರ ಕರ್ನಾಟಕ ಅಭಿವೃದ್ಧಿ: ಮರೀಚಿಕೆ
North Karnataka development: A mirage
ಹೂವಿನ ಹಡಗಲಿ 03 : ಉತ್ತರ ಕರ್ನಾಟಕದ ಅಭಿವೃದ್ಧಿಯ ಸ್ಥಿತಿಗತಿಯು ಪ್ರಸ್ತುತ ಮಿಶ್ರ ಪ್ರತಿಕ್ರಿಯೆಗಳಿಂದ ಕೂಡಿದೆ. ಒಂದು ಪ್ರದೇಶ ಮೂಲಸೌಕರ್ಯ ಮತ್ತು ತಾಂತ್ರಿಕ ಬೆಳವಣಿಗೆಯತ್ತ ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಪ್ರಾದೇಶಿಕ ಅಸಮಾನತೆಯ ಸವಾಲುಗಳು ಹಾಗೆಯೇ ಉಳಿದಿದ್ದು ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಹರಪನಹಳ್ಳಿ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಸತೀಶ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಇಟ್ಟಗಿ ಹೋಬಳಿ ಘಟಕ ತಾಲೂಕಿನ ಮಹಾಜನದ ಹಳ್ಳಿ ಗ್ರಾಮದ ತಿಗರಿ ಕರಿಯಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪಾಟೀಲ್ ಅನ್ನದಾನ ಗೌಡರ, ಪಾಟೀಲ್ ಚನ್ನನ ಗೌಡರ ಸ್ಮಾರಕದತ್ತಿ, ನಂದಿಹಳ್ಳಿ ಹಾಲಪ್ಪ ದತ್ತಿ, .ಎಸ್. ಮೃತ್ಯುಂಜಯಪ್ಪ ಸ್ಮಾರಕ ದತ್ತಿ, ಮುದ್ದಿ ನಿಂಗಪ್ಪ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ’ಉತ್ತರ ಕರ್ನಾಟಕ ಅಭಿವೃದ್ಧಿಯ ಸ್ಥಿತಿಗತಿಗಳು’ ವಿಷಯ ಕುರಿತು ಮಾತನಾಡಿದರು.
ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಪ್ರಮುಖ ಸ್ಥಿತಿಗತಿಗಳು ಇಂತಿವೆ:. 1.ಪ್ರಾದೇಶಿಕ ಅಸಮಾನತೆ ,2.ಕೈಗಾರಿಕೆ ಮತ್ತು ತಂತ್ರಜ್ಞಾನ, 3.ನೀರಾವರಿ ಯೋಜನೆಗಳು,4. ಮೂಲಸೌಕರ್ಯ ಮತ್ತು ರೈಲ್ವೆ, ವಿಮಾನ ನಿಲ್ದಾಣದ ಕುರಿತು ಉಪನ್ಯಾಸ ನೀಡಿದರು. ಶಾಲೆಯ ಮುಖ್ಯ ಗುರುಗಳು ಸಿ.ಗುರುಬಸವರಾಜ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಾಹಿತ್ಯಿಕ,ಸಾಂಸ್ಕೃತಿಕ ಒಲವನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ಸಾಹಿತಿ ಕಾರ್ತಿಕ ಆಚಾರ್ಯ, ಎಂ.ನಿಂಗರಾಜ ದತ್ತಿ ಉಪನ್ಯಾಸ ನೀಡಿದರು. ವಿಜ್ಞಾನ ಶಿಕ್ಷಕ ಎಂ.ಕೊಟ್ರೇಶ್ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಕವನ ವಾಚನ, ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಜರುಗಿದವು. ಅಧ್ಯಕ್ಷತೆಯನ್ನು ಇಟ್ಟಗಿ ಹೋಬಳಿ ಘಟಕದ ಅಧ್ಯಕ್ಷ ಜಿ.ಬಿ.ವಿನಯರಾಜ ಆಚಾರ್ಯ ವಹಿಸಿದ್ದರು. ಶಿಕ್ಷಕಿ ಸರ್ವಮಂಗಳ ವಂದಿಸಿದರು. ಶಿಕ್ಷಕ ಗುರುಬಸವರಾಜ ಕಾರ್ಯಕ್ರಮ ನಿರ್ವಹಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 