ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
North Zone Police take strict measures to curb rowdyism: 23 rowdies externed.
ಜುಲೈನಲ್ಲಿ 53 ರೌಡಿ ನಿಗ್ರಹ ಪಡೆಗಳ ರಚನೆ; 148 ಮುಂಜಾಗ್ರತಾ ಪ್ರಕರಣ, 23 ಗಡಿಪಾರು
ಬೆಳಗಾವಿ : ಉತ್ತರ ವಲಯದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ವಲಯ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಜುಲೈ 2026ರಲ್ಲಿ ರೌಡಿ ಜನರ ವಿರುದ್ಧ ಕಾನೂನುಬದ್ಧವಾಗಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.
ರೌಡಿಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಪ್ರತಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ವೃತ್ತ ಕಚೇರಿ ಮಟ್ಟದಲ್ಲಿ ರೌಡಿ ನಿಗ್ರಹ ಪಡೆಗಳನ್ನು ರಚಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 19, ವಿಜಯಪುರದಲ್ಲಿ 11, ಬಾಗಲಕೋಟೆಯಲ್ಲಿ 9, ಧಾರವಾಡದಲ್ಲಿ 6 ಹಾಗೂ ಗದಗ ಜಿಲ್ಲೆಯಲ್ಲಿ 8 ಪಡೆಗಳನ್ನು ರಚಿಸಲಾಗಿದ್ದು, ಉತ್ತರ ವಲಯದಲ್ಲಿ ಒಟ್ಟು 53 ರೌಡಿ ನಿಗ್ರಹ ಪಡೆಗಳು ಕಾರ್ಯನಿರ್ವಹಿಸುತ್ತಿವೆ.
148 ಮುಂಜಾಗ್ರತಾ ಪ್ರಕರಣ ದಾಖಲು: ರೌಡಿ ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಃಓSS)ಯ ಕಲಂ 126, 127, 128 ಮತ್ತು 129ರ ಅಡಿಯಲ್ಲಿ ಒಟ್ಟು 148 ಪ್ರಕರಣಗಳನ್ನು ದಾಖಲಿಸಲಾಗಿದೆ.
ಜಿಲ್ಲಾವಾರು ವಿವರ: ಬೆಳಗಾವಿ–32, ವಿಜಯಪುರ–70, ಬಾಗಲಕೋಟೆ–20, ಧಾರವಾಡ–2, ಗದಗ–24 ಹೀಗೆ 148 ಮುಂಜಾಗ್ರತಾ ಪ್ರಕರಣ ದಾಖಲು ಮಾಡಲಾಗಿದೆ.
23 ರೌಡಿಗಳ ಗಡಿಪಾರು : ರೌಡಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಗಡಿಪಾರು ಕ್ರಮ ಕೈಗೊಳ್ಳಲಾಗಿದ್ದು, ಉತ್ತರ ವಲಯದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 23 ರೌಡಿ ಜನರನ್ನು ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ.
ಜಿಲ್ಲಾವಾರು ವಿವರ: ವಿಜಯಪುರ–1, ಬಾಗಲಕೋಟೆ–10, ಧಾರವಾಡ–2, ಗದಗ–10 ಹೀಗೆ ಒಟ್ಟು 23 ರೌಡಿಗಳ ಗಡಿಪಾರು ಮಾಡಲಾಗಿದೆ.
6 ಜನರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ : ಗಂಭೀರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ರೌಡಿ ಜನರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 2, ವಿಜಯಪುರದಲ್ಲಿ 2 ಹಾಗೂ ಬಾಗಲಕೋಟೆಯಲ್ಲಿ 2 ಪ್ರಕರಣಗಳಂತೆ ಒಟ್ಟು 6 ಜನರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗಿದೆ.
5 ಆರೋಪಿತರ ವಿರುದ್ಧ ಕೋಕಾ ಕಾಯ್ದೆ : ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಿತರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಒಂದು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ 5 ಆರೋಪಿತರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಏಅಔಅಂ)ಯನ್ನು ಅನ್ವಯಿಸಿ ತನಿಖೆ ಕೈಗೊಳ್ಳಲು ಕ್ರಮ ಜರುಗಿಸಲಾಗಿದೆ.
ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತರ ವಲಯದ ಎಲ್ಲಾ ಜಿಲ್ಲೆಗಳಲ್ಲಿ ನಿರಂತರ ನಿಗಾ ಮತ್ತು ವಿಶೇಷ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ 