ಬಳ್ಳಾರಿ

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ: ಶಶೀಲ್ ಜಿ. ನಮೋಶಿ ಪರ ಅಮರನಾಥ ಪಾಟೀಲ ಪ್ರಚಾರ

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ: ಶಶೀಲ್ ಜಿ. ನಮೋಶಿ ಪರ ಅಮರನಾಥ ಪಾಟೀಲ ಪ್ರಚಾರ

ಬಳ್ಳಾರಿ,ಆ,13 : ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಬಳ್ಳಾರಿ ವಿಭಾಗದ ಪ್ರಭಾರಿಗಳಾದ ಅಮರನಾಥ ಪಾಟೀಲ ಮಹಾಗಾಂವ ಅವರು ಇಂದು ಬಳ್ಳಾರಿ ನಗರದ ಸರಳಾದೇವಿ ಕಾಲೇಜಿಗೆ ಭೇಟಿ ನೀಡಿ, ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರವಾಗಿ ಮಾತಯಾಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಾಂಜಿನಿ ಕೆ., ಅಲ್ಪಸಂಖ್ಯಾತರ ಜಿಲ್ಲಾ ಮೋರ್ಚಾದ ಪದಾಧಿಕಾರಿಗಳು, ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಾನ್, ಮಲ್ಲೇಶ್, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ಚಿ 


ಸುದ್ದಿ ಓದಿ