ಬಳ್ಳಾರಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ಶಶೀಲ್ ಜಿ. ನಮೋಶಿಗೆ ಬೆಂಬಲ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ಶಶೀಲ್ ಜಿ. ನಮೋಶಿಗೆ ಬೆಂಬಲ


ಬಳ್ಳಾರಿ, ಅ.5: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ್ತೈಹ್ಪ್ತೃಹಿಹ್ಪಳ್ತವ್ಠ್ಲಿ ಮೈತ್ರಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಸೋಮವಾರ ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಭರ್ಜರಿ ಮತಯಾಚನೆ ನಡೆಯಿತು.  

ನಗರದ ಫಸ್ಟ್ಗೇಟ್ನ ಗಾಳಿರುಕಿಣಿಮ್ಮ ಚಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಸತ್ಯನಾರಾಯಣಪೇಟೆಯ ಸರಳಾದೇವಿ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಪದಾಧಿಕಾರಿಗಳು ಮತಯಾಚಿಸಿದರು. ಶಶೀಲ್ ಜಿ. ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.  

ಸರಳಾದೇವಿ ಕಾಲೇಜಿನಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ, ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳನ್ನು ್ತೈಹ್ಪ್ತೃಹಿಹ್ಪಳ್ತವ್ಠ್ಲಿ ಮೈತ್ರಿಯಾಗಿ ಎದುರಿಸುವ ಕುರಿತು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಬಳ್ಳಾರಿಯಲ್ಲಿಯೂ ಈ ಕುರಿತು ಸಭೆ ನಡೆಸಿ ಚರ್ಚಿಸಲಾಗಿದೆ. ಶಿಕ್ಷಕರು ಹಾಗೂ ಮತದಾರರು ಮೈತ್ರಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.  

ರಾಜ್ಯದಲ್ಲಿ ಕುಮಾರಣ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಳವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಕ್ರಮ ಕೈಗೊಂಡಿದ್ದರು. ಶಿಕ್ಷಕರು ಮತ್ತು ಮತದಾರರು ಇದನ್ನು ಗಮನದಲ್ಲಿಟ್ಟುಕೊಂಡು ಅ.23ರಂದು ನಡೆಯಲಿರುವ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮುಖಂಡರು ಕೋರಿದರು.  


ಸುದ್ದಿ ಓದಿ