ವಾಯುವ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಕಾಂಗ್ರೆಸ್ ಗೆಲವು ವಿಜಯೋತ್ಸವ
ತಾಳಿಕೋಟೆ15: ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಟಾಕ್ಷಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೇಸ್ ಮುಖಂಡ ಸಂಗನಗೌಡ ಅಸ್ಕಿ, 40 ವರ್ಷದ ಶ್ರಮದ ಫಲವಾಗಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತ, ಬೆಲೆ ಏರಿಕೆ ನೀತಿಂದಾಗಿ ಜನ ರೋಶಿ ಹೋಗಿದ್ದಾರೆ. ಪ್ರಜ್ಞಾವಂತ ಶಿಕ್ಷಕ ಮತದಾರರು ಬಿಜೆಪಿಯನ್ನು ತೆಗೆಯುವ ಮನಸ್ಸು ಮಾಡಿದ್ದಾರೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಇದು ದಿಕ್ಸೂಚಿ ಎಂದು ಪ್ರಜ್ಞಾವಂತ ಮತದಾರರು ತೋರಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೇಸ್ ಅಧಿಕಾರಕ್ಕೆ ಬರವುದು ನಿಶ್ಚಿತವಾಗಿ. ಇದು ಗೆಲುವಿಗೆ ಮುನ್ನಡಿ ಬರೆಂದಾಗಿದ್ದು ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಪಕ್ಷವನ್ನು ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಶ್ರಮ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ ನಾವದಗಿ, ಪುರಸಭೆ ಉಪಾಧ್ಯಕ್ಷ ಮುಸ್ತಫಾ ಚೌದ್ರಿ, ಪುರಸಭೆ ಸದಸ್ಯ ಮಲ್ಲಿಕಾರ್ಜುನ ಪಟ್ಟಣಶೇಟ್ಟಿ, ಮಾಜಿ ಪುರಸಭೆ ಸದಸ್ಯ ಪ್ರಭುಗೌಡ ಮದರಕಲ್ಲ, ಆರೀಪ್ ಹೊನ್ನೂಟಗಿ, ಜಿ.ಬಿ.ಕಂಗಳ, ಬಸವರಾಜ ಶೇಳ್ಳಗಿ, ಈರಣ್ಣ ಸಜ್ಜನ, ಮುದಕಣ್ಣ ಕಂಗಳ, ಆಸ್ಪಾಕ್ ಕೆಂಬಾವಿ, ಆಸೀಪ್ ಕೇಂಬಾವಿ, ಫಯಾಜ್ ಹೊನ್ನೂಟಗಿ, ಡಿ.ಎಸ್.ಹಿರೇಮಠ, ಎಂ.ಜಿ.ಪಾಟೀಲ, ಸೇರಿದಂತೆ ಇತರರು ಇದ್ದರು.