ಗುಲಾಬಿ ಆಂದೋಲನ ಹಮ್ಮಿಕೊಳ್ಳಲು ಶಾಲಾ ಮುಖ್ಯಸ್ಥರಿಗೆ ಸೂಚನೆ
ಜಮಖಂಡಿ 13: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಎಲ್ಲ ಶಾಲೆಗಳಲ್ಲಿ ಗುಲಾಬಿ ಆಂದೋಲನ ಹಮ್ಮಿಕೊಳ್ಳಲು ಶಾಲಾ ಮೂಖ್ಯಸ್ಥರಿಗೆ ಬಿಈಓ ಅಶೋಕ ಬಸಣ್ಣವರ ಸೂಚಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಡಿಡಿಪಿಐ ಅವರ ಆದೇಶದಂತೆ ಈ ಕಾರ್ಯಕ್ರಮದಡಿಯಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಗುಲಾಬಿ ಆಂದೋಲನ ಹಮ್ಮಿಕೊಳ್ಳಬೇಕಾಗಿರುತ್ತದೆ. ರಾಷ್ಟ್ರೀಯ ಆಂದೋಲನದ ಮುಖಾಂತರ ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ಮಾರಾಟಗಾರರಿಗೆ ತಂಬಾಕು ಸೇವನೆಯ ದುಷ್ಕರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ -2003ರ (ಕೋಟಾ)ಸೆಕ್ಷನ್ 6(ಬಿ)ನ ನಿಬಂಧನೆಗಳ ಬಗ್ಗೆ ಅರಿವು ಮೂಡಿಸಬೇಕಾಗಿರುತ್ತದೆ ಎಂದರು.
ಶಿಕ್ಷಣ ಸಂಸ್ಥೆಯ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ತಂಬಾಕು ಅಂಗಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಕೆಂಪು ಗುಲಾಬಿಯ ಜೊತೆಗೆ ತಂಬಾಕು ಮಾರಾಟಗಾರರಿಗೆ ಅದರ ದುಷ್ಪರಿಣಾಮಗಳ ಬಗ್ಗೆ ಸಂವೇದನಾ ಶೀಲಗೊಳಿಸುವುದು ಹಾಗೂ ತಂಬಾಕು ಸೇವನೆ, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಹಾಗೂ ಎಲ್ಲ ಶಿಕ್ಷಣ ಸಂಸ್ಥೆಗಳು ಗುಲಾಬಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿ,ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ಮಾಡಲು ಸಹಕರಿಸಬೇಕೆಂದು ಬಿಈಓ ಅಶೋಕ ಬಸಣ್ಣವರ ತಿಳಿಸಿದ್ದಾರೆ.