ಹೊಸಪೇಟೆ

ಪರೀಕ್ಷೆ ಆಯೋಜನೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಸೂಚನೆ

ಪರೀಕ್ಷೆ ಆಯೋಜನೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಸೂಚನೆ

ಪರೀಕ್ಷೆ ಆಯೋಜನೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಸೂಚನೆ

ಹೊಸಪೇಟೆ 25 : ಗ್ರಾಮ ಅಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26 ಮತ್ತು 27 ರಂದು ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಪರೀಕ್ಷಾ ಲೋಪವಾಗದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ ತಿಳಿಸಿದರು. 

ಆಕ್ಟೋಬರ್ 25 ರಂದು ವೀಡಿಯೋ ಸಂವಾದದ ಮೂಲಕ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳಿದ್ದು ಅ. 26 ರಂದು ಬೆಳಿಗ್ಗೆ 2.30 ರಿಂದ 4.30 ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ಹೊಸಪೇಟೆಯ 2 ಕೇಂದ್ರಗಳಲ್ಲಿ ನಡೆಯಲಿದ್ದು 1115 ಆಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅ. 27 ರಂದು ಬೆಳಗ್ಗೆ 10.30. ರಿಂದ 12.30 ರವರೆಗೆ ಒಂದು ಪತ್ರಿಕೆ ಮತ್ತು ಮಧ್ಯಾಹ್ನ 2.30 ರಿಂದ 4.30 ರವರೆಗೆ ಪರೀಕ್ಷೆ ನಡೆಯಲಿದ್ದು ಒಟ್ಟು 19 ಕೇಂದ್ರಗಳಲ್ಲಿ 9280 ಆಭ್ಯರ್ಥಿಗಳು ಪರೀಕ್ಷೆ ಬರೆಯುವರು ಎಂದು ತಿಳಿಸಿದರು.  

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ನಿಯೋಜಿಸಿದ ಎಲ್ಲ ಅಧಿಕಾರಿಗಳು ಕಟ್ಟೆಚ್ಚಾರದಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಇದರ ಜೊತೆಗೆ ತ್ರಿಸದಸ್ಯ ಸಮಿತಿ ಮಾರ್ಗಾಧಿಕಾರಿಗಳನ್ನು ಮತ್ತು ಜಾಗೃತಿ ಸದಸ್ಯರನ್ನು ನೇಮಿಸಲಾಗಿದ್ದು ಪರೀಕ್ಷೆಯನ್ನು ಕಟ್ಟು ನಿಟ್ಟಾಗಿ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.ಪುರುಷ ಅಭ್ಯರ್ಥಿಗಳ ವಸ್ತ್ರಸಂಹಿತೆ ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ ಇಲ್ಲದಿರುವುದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್ ರಹಿತ ಶರ್ಟ್‌ ಧರಿಸಲು ಆದ್ಯತೆ ನೀಡಿದೆ.ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ ಜೀನ್ಸ್‌ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ., ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಆಡಿ ಭಾಗ ಇರುವ ಚಪ್ಪಲಿ ಧರಿಸುವುದು., ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. 

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ., ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಜೀನ್ಸ್‌ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಧರಿಸುವುದು. ಎತ್ತರವಾದ ಹಿಮ್ಮಡಿಯ ಶೂಗಳನ್ನು ಅಥವಾ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. ವಸ್ತ್ರ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಈ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಾರಾದ ನಾಗರಾಜ ಹವಾಲ್ದಾರ ಮತ್ತು ಇನ್ನಿತರ ಅಧಿಕಾರಿಗಳು ವೀಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು. 


ಸುದ್ದಿ ಓದಿ