ಕುಖ್ಯಾತ ಡ್ರಗ್ಸ್ ಪ್ಲೆಡರ್ ಬಂಧನ: 20ಲಕ್ಷ ಮೌಲ್ಯದ ಮಾದಕ ದ್ರವ್ಯ ವಶ
ಬೆಂಗಳೂರು, ಜ 30, ವಿದೇಶಿ ಮೂಲದ ಕುಖ್ಯಾತ ಪೆಡ್ಲರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಾಂಜಾನಿಯಾ ಮೂಲದ ಎಜಿಕೆ ಸೆಲೆಸ್ಟೈನ್ (39) ಬಂಧಿತ ಆರೋಪಿ. ನಗರದ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊರಮಾವು-ಅಗರದ ಬಾಡಿಗೆ ಮನೆಯೊಂದರಲ್ಲಿ ಆರೋಪಿ ಎಜಿಕೆ, ಎಸ್ಟೀಸಿ ಎಂಬ ಮಾತ್ರೆಗಳನ್ನು ತನ್ನ ಪರಿಚಿತ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ನಗರ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 20 ಲಕ್ಷ ರೂ ಮೌಲ್ಯದ ಎಸ್ಟೇಸಿ ಮಾತ್ರೆಗಳು, ಒಂದು ಕಾರು, ಎರಡು ಮೊಬೈಲ್ ಹಾಗೂ 5000 ರೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಡಾ.ಹೆಚ್ ಎನ್ ವೆಂಕಟೇಶ್ ಪ್ರಸನ್ನ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 