ನೂಲಿಯ ಚಂದಯ್ಯ, ನಾರಾಯಣಗುರು ಜಯಂತಿ: ಪೂರ್ವಭಾವಿ ಸಭೆ

ನೂಲಿಯ ಚಂದಯ್ಯ, ನಾರಾಯಣಗುರು ಜಯಂತಿ: ಪೂರ್ವಭಾವಿ ಸಭೆ  Nuliya Chandayya and Narayana Guru Jayanti: Preparatory Meeting

ಮುದ್ದೇಬಿಹಾಳ 28 : ನೂಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ನಿರ್ಧರಿಸಲಾಯಿತು. ಪಟ್ಟಣದ ಸ್ವಚ್ಛತೆಗೆ ಪುರಸಭೆ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ ನೂಲಿಯ ಚಂದಯ್ಯ ಜಯಂತಿಗೆ ಆಮಂತ್ರಣ ಪತ್ರಿಕೆ ಮುದ್ರಿಸದಿರುವುದಕ್ಕೆ ಭಜಂತ್ರಿ ಸಮಾಜದ ಅಧ್ಯಕ್ಷ ನಾಗಪ್ಪ ಭಜಂತ್ರಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಸಮಾಜಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು.