ಅಗಡಿಯಲ್ಲಿ ಪೌಷ್ಟಿಕಾಂಶ ದಿನಾಚರಣೆ
Nutrition Day Celebration at Agadi
ಮುಂಡಗೋಡ 22: ಅಗಡಿ ಗ್ರಾಮದ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪೌಷ್ಟಿಕಾಂಶಹಿ2026 ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಶಿವರಾಜು ಎಚ್.ಎಸ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಸಮತೋಲಿತ ಪೌಷ್ಟಿಕ ಆಹಾರ ನೀಡುವ ಅಗತ್ಯ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ವರದಕ್ಷಿಣೆ ನೀಡುವುದು ಮತ್ತು ಸ್ವೀಕರಿಸುವುದು ಕಾನೂನುಬಾಹಿರವಾಗಿದ್ದು, ಕಾಯ್ದೆಯಡಿ ಕೈಗೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ಅರಿವು ಮೂಡಿಸಿದರು. ಪ್ಯಾನೆಲ್ ವಕೀಲ ರವೀಂದ್ರ ಕುಮಾರ್ ಕೆ. ಹೆಗ್ಡೆ ಅವರು ಪೌಷ್ಟಿಕಾಂಶ, ಮಕ್ಕಳ ರಕ್ಷಣೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತು ಮಾಹಿತಿ ನೀಡಿದರು. ಪಿಎಸ್‌ಐ ವಿಜಯಲಕ್ಷ್ಮಿ ಅವರು ವರದಕ್ಷಿಣೆ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, 112 ಸಹಾಯವಾಣಿ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಸುರಕ್ಷತೆ ಕುರಿತು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀದೇವಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಗುವಿಗೆ ಅನ್ನಪ್ರಾಶನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕ ಪ್ರಸಾದ್ ರಮೇಶ್ ಹೆಗ್ಡೆ, ವಕೀಲರ ಸಂಘದ ಕಾರ್ಯದರ್ಶಿ ಎಸ್.ಕೆ. ಕೊಳ್ಳಾನವರ, ಹುನಗುಂದ ಗ್ರಾಪಂ ಪಿಡಿಒ ವೆಂಕಪ್ಪ ಲಮಾಣಿ, ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 