ಪೋಷಣ ಮಾಸಾಚರಣೆ ಕಾರ್ಯಕ್ರಮ
ಮುಂಡಗೋಡ 07: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ, ಶಿಶು ಅಭಿವೃದ್ಧಿ ಯೋಜನೆ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನ ಇಂದೂರ ಗ್ರಾಮದ ಶ್ರೀಕಲ್ಮೇಶ್ವರ ದೇವಸ್ಥಾನದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಡಿ ಪೋಷಣ ಮಾಸಾಚರಣೆ ಕಾರ್ಯಕ್ರಮ ಬುಧವಾರ ಜರುಗಿತು.
ಗ್ರಾ.ಪಂ. ಅಧ್ಯಕ್ಷ ಶಶಿಧರ ಪರವಾಪೂರ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷೆ ಕಸ್ತೂರೆವ್ವಾ ಹರಿಜನ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ದೀಪಾ ಬಂಗೇರ, ಮೇಲ್ವಿಚಾರಕಿ ರೂಪಾ ಅಂಗಡಿ, ಮಂಜುನಾಥ ನಡಿಗೇರ, ಗ್ರಾ.ಪಂ. ಮಾಜಿ ಅಧ್ಯಕ್ಷೆ ರೇಣುಕಾ ಬಡಿಗೇರ, ಸದಸ್ಯರಾದ ಲಕ್ಷ್ಮೀ ಹರ್ತಿ, ಶಿವಕ್ಕ ಬಳ್ಳಾರಿ, ರತ್ನವ್ವಾ ಈಳಿಗೇರ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.