ಇಂಡಿ

ಸಶಕ್ತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ: ಬಡಿಗೇರ

ಸಶಕ್ತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ: ಬಡಿಗೇರ


ಇಂಡಿ 25: ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ರಾಷ್ಟ್ರೀಯ ಪೋಷಣಾ ಮಾಸಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುನಂದಾ ವಾಲಿಕಾರ ಹಾಗೂ ತಡವಲಗಾ ವಲಯ ಮೇಲ್ವಿಚಾರಕ ಜಿ.ಬಿ. ಬಡಿಗೇರ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಬಿ. ಬಡಿಗೇರ, ಸಮತೋಲಿತ ಪೌಷ್ಟಿಕ ಆಹಾರವು ಆರೋಗ್ಯಕರ ಹಾಗೂ ಸಶಕ್ತ ಸಮಾಜದ ನಿರ್ಮಾಣಕ್ಕೆ ಪ್ರಮುಖ ತಳಹದಿಯಾಗಿದೆ. 

 ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಪೋಷಕಾಂಶಗಳ ಕೊರತೆ ನಿವಾರಣೆಗೆ ಪೋಷಣಾ ಮಾಸಾಚರಣೆ ಮಹತ್ವದ್ದಾಗಿದೆ. ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಹದಿಹರೆಯದ ಹೆಣ್ಣುಮಕ್ಕಳಲ್ಲಿ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.  

ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪತ್ರಕರ್ತ ಸಚೀನ ಇಂಡಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಮಲ್ಲಮ್ಮ ಬ್ಯಾಳಿ ಸ್ವಾಗತಿಸಿದರು. ರೂಪಾ ಮಿರಗಿ ನಿರೂಪಿಸಿದರು. 


ಸುದ್ದಿ ಓದಿ