ಸೋಮವಾರ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ
ಕುಷ್ಟಗಿ 10: ಪಟ್ಟಣದ ಇನ್ನರ್ ವೀಲ್ ಕ್ಲಬ್ ವತಿಯಿಂದ ನಾಳೆ ಸೋಮವಾರ ಬೆಳಗ್ಗೆ 11:00 ಗಂಟೆಗೆ ಇಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದ ದಾಸೋಹ ಭವನದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನರ್ ವೀಲ್ ಕ್ಲಬ್ ನ ಜಿಲ್ಲಾ ಚೇರ್ಮನ್ ಡಾ.ಮಾಧವಿ ದೇವಿ, ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಮಾಲತಿ ನಾಯಕ್, ಬಾಗಲಕೋಟೆ ಜಿಲ್ಲೆಯ ಬಿಜೆಪಿ ಮಹಿಳಾ ಯುವ ಮೋರ್ಚಾ ಘಟಕದ ಅಧ್ಯಕ್ಷ ತೃಪ್ತಿ ಸಾಲಿಮಠ, ಇನ್ನರ್ ವೀಲ್ ಕ್ಲಬ್ ನ ಸದಸ್ಯರಾದ ಡಾ. ಪಿ.ಎಂ ಪಾರ್ವತಿ, ಡಾ. ಕುಮುದಾ ಪಲ್ಲೆದ್, ಡಾ. ವಿಶಾಲಾಕ್ಷಿ, ಡಾ. ನೇತ್ರಾವತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಂತರ ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷರು ಸುಮಾ ಬ್ಯಾಳಿ, ಕಾರ್ಯದರ್ಶಿ ಗೌರಮ್ಮ ಕುಡತಿನಿ ಇವರ ಪದಗ್ರಹಣ ಕಾರ್ಯಕ್ರಮ ನಡೆಯುತ್ತದೆ ಎಂದು ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಲತಾ ಕೂರ್ಮಾಚಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.