ಡಾ. ಬಾಬು ಜಗಜೀವನರಾಂ ಅವರ 40ನೇ ಪುಣ್ಯಸ್ಮರಣೆ ಆಚರಣೆ

ಡಾ. ಬಾಬು ಜಗಜೀವನರಾಂ ಅವರ 40ನೇ ಪುಣ್ಯಸ್ಮರಣೆ ಆಚರಣೆ  Observance of Dr. Babu Jagjivan Ram's 40th Death Anniversary

ಲೋಕದರ್ಶನ ವರದಿ

ಬೆಟಗೇರಿ 06: ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ 40ನೇ ಪುಣ್ಯಸ್ಮರಣೆಯನ್ನು ಸೋಮವಾರ ಬೆಟಗೇರಿಯ ಶ್ರೀ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿ ಅವರು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.  ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.