ಶ್ರದ್ಧಾಭಕ್ತಿಯಿಂದ ರಂಜಾನ್ ಆಚರಣೆ
ಹೂವಿನಹಡಗಲಿ 22: ಹೂವಿನಹಡಗಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ಎಪಿಎಂಸಿ ಬಳಿ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಏಕಕಾಲಕ್ಕೆ ಎಲ್ಲರೂ ಸೇರಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚಿಕ್ಕಮಕ್ಕಳು ಸಹ ಭಾಗವಹಿಸಿದ್ದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ,ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳುವಂತೆ ಕರೆ ನೀಡಿದರು.
ಪ್ರಾರ್ಥನಾ ಸ್ಥಳದಲ್ಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ, ಚಾಂದಸಾಹೇಬ್,ಕೆ.ಗೌಸಮೊಹಿದ್ದೀನ್ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.