ಮರಿಶಾಂತವೀರ ಮಹಾಶಿವಯೋಗಿಗಳ 59ನೇ ಪುಣ್ಯಸ್ಮರಣೆ ಆಚರಣೆ
Observance of the 59th death anniversary of Marishantaveera Mahashivayogi
ಕೊಪ್ಪಳ 10: ಸಂಸ್ಥಾನ ಶ್ರೀ ಗವಿಮಠದ 16ನೇ ಪೀಠಾಧಿಪತಿಗಳಾದ ಮ.ನಿ.ಪ್ರ. ಜಗದ್ಗುರು ಪರಮಪೂಜ್ಯ ಲಿಂಗೈಕ್ಯ ಶ್ರೀ ಮರಿಶಾಂತವೀರ ಮಹಾಶಿವಯೋಗಿಗಳ 59ನೇ ಪುಣ್ಯಸ್ಮರಣೋತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.
ವಿದ್ಯೆ, ವೈದ್ಯ ಹಾಗೂ ಅನ್ನ ಎಂಬ ತ್ರಿವಿಧ ದಾಸೋಹದ ಮೂಲಕ ಸಮಾಜಕ್ಕೆ ಬೆಳಕಾದ ಪೂಜ್ಯರು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿದರು. ಆಯುರ್ವೇದ ಚಿಕಿತ್ಸೆಯ ಮೂಲಕ ದೀನದಲಿತರ ಸೇವೆ ಸಲ್ಲಿಸಿದ ಮಹಾನ್ ಯೋಗಿಯಾಗಿದ್ದ ಅವರು 1922ರಿಂದ 1967ರವರೆಗೆ 45 ವರ್ಷಗಳ ಕಾಲ ಗವಿಮಠದ ಪೀಠವನ್ನು ಅಲಂಕರಿಸಿ, ನಾಡಿನಾದ್ಯಂತ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಜಾಗೃತಿ ಮೂಡಿಸಿದರು.
ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಗವಿಸಿದ್ಧೇಶ್ವರ ಕಾಲೇಜ್ ಆಫ್ ನರ್ಸಿಂಗ್ನ ಶೈಕ್ಷಣಿಕ ನಿರ್ದೇಶಕರಾದ ಶ್ರೀ ನಾಗರಾಜ ಬೊಮ್ಮನಾಳ, ಕಾಲೇಜಿನ ಪ್ರಾಚಾರ್ಯೆ ಡಾ. ಮರ್ಷಿಲ್ ಎಸ್.ಎಚ್. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪೂಜ್ಯರ ಗದ್ದುಗೆಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಗುರು ವಂದನೆ, ಪ್ರಾರ್ಥನೆ ಹಾಗೂ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಪ್ರಿಯಾ ಮೆಡಿಕಲ್ ಕಾಲೇಜಿನ ಬೋಧಕ ಸಿಬ್ಬಂದಿ ಶ್ರೀ ನಿರಂಜನ ಮಾತನಾಡಿ, “ಪೂಜ್ಯರು ಅಕ್ಷರ, ಅನ್ನ ಮತ್ತು ಜೋಳಿಗೆಯ ಮೂಲಕ ಸಮಾಜಕ್ಕೆ ಧಾರ್ಮಿಕ ಶಿಕ್ಷಣ, ಆಯುರ್ವೇದ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.
ಪೂಜ್ಯರು 1963ರಲ್ಲಿ ಸ್ಥಾಪಿಸಿದ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟ್ ಇಂದು ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದೆ. ಈ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು “ಸೇವೆಯೇ ಮಹಾಪೂಜೆ” ಎಂಬ ಪೂಜ್ಯರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು. ಗವಿಮಠದ ಭವ್ಯ ಪರಂಪರೆ ಹಾಗೂ ಪೂಜ್ಯರ ತತ್ವಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 