ಕೆಲಸಕ್ಕಾಗಿ ಜಾಬ್ ಕಾರ್ಡ್ ಪಡೆಯೋದು ನಿಮ್ಮ ಹಕ್ಕು: ಮಹದೇವಪ್ಪ ಏವೂರ
Obtaining a job card for work is your right: Mahadevappa Evur
ಲೋಕದರ್ಶನ ವರದಿ
ಇಂಡಿ 20: ವಿಬಿ-ಜಿ ರಾಮ್-ಜಿ ಯೋಜನೆಯಡಿ ಇಂಡಿ ತಾಲ್ಲೂಕಿನ ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತಾಜ್ಯ ವಿಲೇವಾರಿ ಘಟಕ ಹತ್ತಿರ ಅರಣ್ಯ ಪ್ರದೇಶದಲ್ಲಿ ಟ್ರೆಂಚ್ಗಳ ನಿರ್ಮಾಣ ಕಾಮಗಾರಿಯನ್ನು ಇಂಡಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಹದೇವಪ್ಪ ಏವೂರ ಹಾಗೂ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಸಂಜಯ ಖಡೆಗೆಕರ್ ರವರು ಬೇಟಿ ನೀಡಿ ಪರೀಶೀಲಿಸಿದರು.
ಕಾಮಗಾರಿ ಸ್ಥಳದಲ್ಲಿ ಮಹಿಳೆಯರು 64, ಪುರುಷರು 10 ಒಟ್ಟು 74 ಕೂಲಿಕಾರರ ಭಾಗವಹಿಸುವಿದ್ದರು. ಮಣ್ಣಿನ ಸಂರಕ್ಷಣೆ ಹಾಗೂ ಮಳೆನೀರು ಸಂಗ್ರಹಣೆಗೆ ಪೂರಕ ಕಾಮಗಾರಿವಾಗಿದೆ ಎಂದು ಹೇಳಿದರು.
ಕೂಲಿಕಾರರೊಂದಿಗೆ ಸಂವಾದ ನಡೆಸಿ ವಿಬಿ-ಜಿ ರಾಮ ಜಿ ಯೋಜನೆಯಡಿ ಪ್ರತಿ ಕುಟುಂಬಕ್ಕೂ ಒಂದು ಮಾನವ ದಿನಕ್ಕೆ ರೂ.382 ರಂತೆ 125 ದಿನಗಳ ಉದ್ಯೋಗ ಖಾತ್ರಿ ಪಡಿಸುವಲ್ಲಿ ಜಾಬ್ ಕಾರ್ಡ್ ಪ್ರಮುಖ ಪಾತ್ರ ವಹಿಸುತ್ತದೆ. ಕೆಲಸಕ್ಕಾಗಿ ಜಾಬ್ ಕಾರ್ಡ್ ಪಡೆಯುವುದು ನಿಮ್ಮ ಹಕ್ಕಾಗಿದೆ. ನಿಮ್ಮ ಜಾಬ್ ಕಾರ್ಡ್ ನಿಮಗೆ ಉದ್ಯೋಗ ಖಾತ್ರಿ ನೀಡುವುದರ ಜೊತೆಗೆ ವಾರ್ಷಿಕವಾಗಿ 47,750/- ವೇತನದ ಖಾತ್ರಿ ನೀಡುತ್ತದೆ. ಇದಕ್ಕಾಗಿ ಎಲ್ಲರೂ ಜಾಬ್ ಕಾರ್ಡ್ ಗಳನ್ನು ಗಳನ್ನು ಕಡ್ಡಾಯವಾಗಿ ಪಡೆದು ಈ ಯೋಜನೆಯ ಪಾಲುದಾರರಾಗಿ ಎಂದು ಏವೂರ ಹೇಳಿದರು.
ತಾಲೂಕಿನ ಬಬಲಾದ ಗ್ರಾಮ ಪಂಚಾಯತಿಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್ ಗ್ರಾಮೀಣ (ವಿಬಿ-ಜಿ ರಾಮ್ ಜಿ) ಯೋಜನೆಯ ಐಇಸಿ ಕಾರ್ಯಕ್ರಮದಡಿ ಹಮ್ಮಿಕೊಂಡ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆ.15 ರಿಂದ ತಾಲೂಕಿನಾದ್ಯಂತ ಗ್ರಾಪಂ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದೆ.
ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿ ಪರೀಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿ ಕೊಡುವುದು, ಜಾಬ್ ಕಾರ್ಡ್ ನವೀಕರಣ ಹಾಗೂ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿ ಉದ್ಯೋಗದ ಬೇಡಿಕೆ ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಗ್ರಾಪಂನಲ್ಲಿ ಮಾಡಲಾಗುತ್ತಿದೆ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 