ಮನರಂಜನೆ

ಸೈನಾ ನೆಹ್ವಾಲ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ನಟ ಸಿದ್ದಾರ್ಥ್ ವಿರುದ್ಧ ಎಫ್ಐಆರ್‌ಗೆ ಸೂಚನೆ

ಸೈನಾ ನೆಹ್ವಾಲ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ನಟ ಸಿದ್ದಾರ್ಥ್ ವಿರುದ್ಧ ಎಫ್ಐಆರ್‌ಗೆ ಸೂಚನೆ

ಹೊಸದಿಲ್ಲಿ, ಜನೆವರಿ 10   ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರ ಮೇಲೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡುವ ಮೂಲಕ ನಟ ಸಿದ್ಧಾರ್ಥ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಟ್ವಿಟ್ಟರ್ ವಾರ್ ನಡುವೆ ಮಧ್ಯೆ ಪ್ರವೇಶಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ನಟ ಸಿದ್ಧಾರ್ಥ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿದೆ.

ಸೈನಾ ನೆಹ್ವಾಲ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಸಿದ್ಧಾರ್ಥ ಟ್ವೀಟನ್ನು ತೆಗೆದು ಹಾಕುವಂತೆ ಹಾಗೂ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಿಳಾ ಆಯೋಗ ಟ್ವಿಟ್ಟರ್ ಗೆ ಸೂಚಿಸಿದೆ. ಅಲ್ಲದೆ, ತಕ್ಷಣ ಈ ಬಗ್ಗೆ ತನಿಖೆ ನಡೆಸಿ ಸಿದ್ಧಾರ್ಥ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಹಾರಾಷ್ಟ್ರ ಡಿಜಿಪಿಗೆ ಹೇಳಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ನಟನ ಟ್ವೀಟ್ ಖಾತೆಯನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಆಯೋಗವು ಈ ವಿಷಯದಲ್ಲಿ ಕ್ರಮಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿ ಓದಿ