ಮಹಾಲಿಂಗಪುರ ತಾಲೂಕು ರಚನೆಗೆ ಅಧಿಕೃತ ಪ್ರಸ್ತಾವನೆ ಸಲ್ಲಿಕೆ: ಜನರಲ್ಲಿ ಹೊಸ ನೀರೀಕ್ಷೆ

ಮಹಾಲಿಂಗಪುರ ತಾಲೂಕು ರಚನೆಗೆ ಅಧಿಕೃತ ಪ್ರಸ್ತಾವನೆ ಸಲ್ಲಿಕೆ: ಜನರಲ್ಲಿ ಹೊಸ ನೀರೀಕ್ಷೆ Official proposal submitted for the formation of Mahalingapura Taluk: New hopes among the people

ಲೋಕದರ್ಶನ ವರದಿ 

ಮಹಾಲಿಂಗಪುರ 20: ಬಹುದಿನಗಳ ಬೇಡಿಕೆಯಾಗಿರುವ ಮಹಾಲಿಂಗಪುರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ರಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದು ಇಡಲಾಗಿದೆ. ತಾಲೂಕು ಕೇಂದ್ರ ರಚನೆಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಸೌಕರ್ಯ, ಜನಸಂಖ್ಯೆ, ವ್ಯಾಪಾರ-ವಹಿವಾಟು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಮಹಾಲಿಂಗಪುರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಕೋರಿ ತಹಶೀಲ್ದಾರ್ ಗೀರೀಶ್ ಸ್ವಾಧಿ ಅವರು ಜಮಖಂಡಿ ಉಪವಿಭಾಗಾಧಿಕಾರಿಗಳಿಗೆ ಬುಧವಾರ ಪ್ರಸ್ತಾವನೆ ಸಲ್ಲಿಸಿದ್ದಾರೆ. 

ಮಹಾಲಿಂಗಪುರವನ್ನು ತಾಲೂಕು ಕೇಂದ್ರವನ್ನಾಗಿ ರಚಿಸಬೇಕೆಂಬುದು ಈ ಭಾಗದ ಜನರ ಬಹುಕಾಲದ ಪ್ರಮುಖ ಬೇಡಿಕೆಯಾಗಿದೆ. ಮಹಾಲಿಂಗಪುರ ಪಟ್ಟಣವು ಸುತ್ತಮುತ್ತಲಿನ ಗ್ರಾಮಗಳಿಗೆ ಶೈಕ್ಷಣಿಕ, ವ್ಯಾಪಾರ, ಆರೋಗ್ಯ, ಕೃಷಿ ಹಾಗೂ ಆಡಳಿತಾತ್ಮಕವಾಗಿ ಪ್ರಮುಖ ಕೇಂದ್ರವಾಗಿ ಬೆಳೆದಿದ್ದು, ಪ್ರತಿನಿತ್ಯ ಸಾವಿರಾರು ಜನರು ವಿವಿಧ ಕೆಲಸಗಳಿಗಾಗಿ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಜನರಿಗೆ ಆಡಳಿತಾತ್ಮಕ ಸೇವೆಗಳು ಮತ್ತಷ್ಟು ಸುಲಭವಾಗಿ ದೊರೆಯುವಂತೆ ಮಹಾಲಿಂಗಪುರವನ್ನು ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ರಚಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.