ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳಿಗೆ ಸೂಚನೆ
Officials instructed to celebrate D. Devaraj Urs Jayanti meaningfully
ಲೋಕದರ್ಶನ ವರದಿ
ವಿಜಯಪುರ 10 : ಆಗಸ್ಟ್ 20ರಂದು ನಡೆಯಲಿರುವ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಶಿಷ್ಟಾಚಾರದಂತೆ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಉದಾರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 20ರಂದು ಬೆಳಿಗ್ಗೆ 9.30ಕ್ಕೆ ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದೆ. ನಗರದ ಪ್ರಮುಖ ವೃತ್ತಗಳ ಮೂಲಕ ಮೆರವಣಿಗೆ ಸಾಗಲಿದ್ದು, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ. ದೇವರಾಜ ಅರಸು ಅವರ ಜೀವನ, ಸಾಧನೆ ಹಾಗೂ ಸಾಮಾಜಿಕ ನ್ಯಾಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಕುರಿತು ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಪ್ರಮುಖ ನಾಯಕರಾಗಿದ್ದಾರೆ. ಅವರ ಸಾಮಾಜಿಕ ಸುಧಾರಣೆಗಳು ಮತ್ತು ಜನಪರ ಕಾರ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಡಿವೈಎಸ್ಪಿ ನಾಗರಾಜ್ ಜಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹನುಮಂತ ಕಾಲತಿಪ್ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ, ತಾಲೂಕು ಕಲ್ಯಾಣಾಧಿಕಾರಿ ಯಾಸಿನ್ ಭಗವಾನ್, ತಾಲೂಕು ವಿಸ್ತರಣಾಧಿಕಾರಿ ರಾಮಲಿಂಗ ಭೈರವಾಡಗಿ, ಜಿಲ್ಲಾ ಪತ್ರಾಂಕಿತ ವ್ಯವಸ್ಥಾಪಕ ಆರಿ್ಜ. ಗುನ್ನಾಪುರ, ಜಿಲ್ಲಾ ಆರೋಗ್ಯ ಇಲಾಖೆಯ ಉಪಶಿಕ್ಷಣಾಧಿಕಾರಿ ರೇಖಾ ದಶವಂತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 