ಬರ ನಿರ್ವಹಣೆಗೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಿ: ತಾಪಂ ಸಾಮಾನ್ಯ ಸಭೆಯಲ್ಲಿ ಸೂಚನೆ

ಬರ ನಿರ್ವಹಣೆಗೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಿ: ತಾಪಂ ಸಾಮಾನ್ಯ ಸಭೆಯಲ್ಲಿ ಸೂಚನೆ  Officials instructed to remain at headquarters and carry out drought management duties: Directive is

ಬರ ನಿರ್ವಹಣೆಗೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಿ: ತಾಪಂ ಸಾಮಾನ್ಯ ಸಭೆಯಲ್ಲಿ ಸೂಚನೆ  


ನರಗುಂದ, ಜು.16: ಮಳೆಯ ಕೊರತೆಯಿಂದ ತಾಲ್ಲೂಕಿನಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಚ್‌.ಬಿ. ಹುಲಗಣ್ಣವರ ಸೂಚಿಸಿದರು. ಗುರುವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ 2026ಹಿ27್ಫೂ ಸಾಲಿನ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯ ಕೊರತೆಯಿಂದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರಿಗೆ ಬೆಳೆ ವಿಮೆ ಕುರಿತು ವಿಶೇಷ ಜಾಗೃತಿ ಮೂಡಿಸಬೇಕು. ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು. ಬೆಳೆಗಳಲ್ಲಿ ಕಾಣಿಸಿಕೊಳ್ಳುತ್ತಿರುವ ವಿವಿಧ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು, ರೈತರಿಗೆ ತಾಂತ್ರಿಕ ಮಾಹಿತಿ ತಲುಪಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ಚಿನಗುಂಡಿ, ಮಳೆಗಾಲದಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.  

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಿಶೇಷ ಅಭಿಯಾನದ ಮೂಲಕ ಮರಳಿ ಶಾಲೆಗೆ ದಾಖಲಿಸಬೇಕು. ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಕಾಪಾಡಲು ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರೀಶೀಲನೆ ನಡೆಸಬೇಕು ಎಂದು ಸೂಚಿಸಿದರು. ವಿಬಿಗ್ರಾಮ್ (ಗಿಃಉಖಂಒಉ) ಯೋಜನೆಯಡಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದು, ವಿವಿಧ ಇಲಾಖೆಗಳು ಅಗತ್ಯ ಕಟ್ಟಡಗಳ ಪ್ರಸ್ತಾವನೆಗಳನ್ನು ತಾಲೂಕು ಪಂಚಾಯಿತಿ ಹಾಗೂ ಸಂಬಂಧಿತ ಗ್ರಾಮ ಪಂಚಾಯಿತಿಗಳಿಗೆ ಸಲ್ಲಿಸಿ ಕ್ರಿಯಾಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಇಲ್ಲ ತಾಲೂಕಿನ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.  

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆ ಅಧಿಕಾರಿಗಳು, ಇತ್ತೀಚೆಗೆ ಸುರಿದ ಮಳೆಯಿಂದ ನವಿಲುತೀರ್ಥ ಜಲಾಶಯದಲ್ಲಿ ಹೆಚ್ಚುವರಿಯಾಗಿ 4 ಟಿಎಂಸಿ ನೀರು ಸಂಗ್ರಹವಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕವೂ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಂಡಿರುವುದರಿಂದ ಸದ್ಯ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.  

ಸಭೆಯಲ್ಲಿ ಆರೋಗ್ಯ, ಕೃಷಿ, ಪಂಚಾಯತ್ ರಾಜ್ ಇಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಾಲಾ ಶಿಕ್ಷಣ, ಅಕ್ಷರ ದಾಸೋಹ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ತೋಟಗಾರಿಕೆ, ಹೆಸ್ಕಾಂ, ಅರಣ್ಯ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ 13 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.