ಸದಲಗಾ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ನಗದು ವಶಕ್ಕೆ ಪಡೆದ ಅಧಿಕಾರಿಗಳು

ಸದಲಗಾ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ನಗದು ವಶಕ್ಕೆ ಪಡೆದ ಅಧಿಕಾರಿಗಳು

ಬೆಳಗಾವಿ : ಯಾವದೇ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ನಗದು ಹಣವನ್ನು ಎಫ್ ಎಸ್ ಟಿ ಹಾಗೂ ಪೋಲೀಸ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸದಲಗಾ ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಇಂದು ಜರಿಗಿದೆ. 

  ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಚೆಕ್ ಪೋಸ್ಟ್ ಗಳ ಮೂಲಕ ಕಟ್ಟೆಚ್ಚರ ವಹಿಸಲಾಗಿದ್ದು,, ಅದರಂತೆ ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಸದಲಗಾ ದತ್ತವಾಡ ಚೆಕ್‌ ಪೊಸ್ಟ್ ನಲ್ಲಿ ಎಫ್ ಎಸ್ ಟಿ ಹಾಗೂ ಪೊಲೀಸ ಅಧಿಕಾರಿಗಳು ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ರೂ‌ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಿಳಿಸಿದ್ದಾರೆ.

ಸುದ್ದಿ ಓದಿ