ಅಧಿಕಾರಿಗಳು ಕರ್ತವ್ಯ ನಿಷ್ಠೆ ಮೆರೆಯರಿ: ಕೃಷ್ಣಮೂರ್ತಿ
Officials should be loyal to their duties: Krishnamurthy
ಲೋಕದರ್ಶನ ವರದಿ
ಯಲಬುರ್ಗಾ 06: ಈ ಗಾಗಲೇ ಮಳೆಗಾಲ ಪ್ರಾರಂಭವಾಗಿದ್ದರಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಅತ್ಯಂತ ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೊಪ್ಪಳ ಜಿಪಂ ಉಪಕಾರ್ಯದರ್ಶಿಗಳು ಹಾಗೂ ಯಲಬುರ್ಗಾ/ಕುಕನೂರು ತಾಪಂ ಆಡಳಿತಾಧಿಕಾರಿಗಳಾದ ಕೃಷ್ಣಮೂರ್ತಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿದ ಇಲಾಖೆಯಲ್ಲಿನ ಕಾಮಗಾರಿಗಳನ್ನು ಶೀಘ್ರವಾಗಿ ಮುಕ್ತಾಯ ಮಾಡಬೇಕು ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ಯಾವುದೇ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.
ಮತ್ತು ಶಾಲೆ ಅಂಗನವಾಡಿಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ಚರಂಡಿ, ರಸ್ತೆ ಸೇರಿದಂತೆ ಮಕ್ಕಳಿಗೆ ತೊಂದರೆಯಾಗುವಂತಹ ಎಲ್ಲಾ ಕಾಮಗಾರಿಗಳನ್ನ ತಕ್ಷಣ ಮುಕ್ತಾಯಗೋಳಿಸಿ ಅನುಕೂಲ ಕಲ್ಪಿಸಿಕೋಡಬೇಕು ಹಾಗೂ ನಿರ್ಲಕ್ಷ್ಯವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವದು ಎಂದರು. ಸಭೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಜೆಸ್ಕಾಂ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಗತಿ ವರದಿಯನ್ನು ಓದಿದರು. ಈ ವೇಳೆ ಯಲಬುರ್ಗಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಕುಕನೂರು ತಾಪಂ ಇಒ ಸಂತೋಷ ಪಾಟೀಲ್ ಬಿರಾದಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 