ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ -ದೀಪಕ ಮಡಿವಾಳರ
Officials should take utmost care to provide infrastructure in villages - Deepak Madiwala
ಹುಬ್ಬಳ್ಳಿ ಜೂ.8: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಗ್ರಂಥಾಲಯ, ಶಿಕ್ಷಣ, ಆರೋಗ್ಯ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಕ್ರಮ ವಹಿಸಬೇಕು. ಶುದ್ದ ಕುಡಿಯುವ ನೀರಿನ ಘಟಕಗಳನ್ನು ಶೀಘ್ರದಲ್ಲೇ ದುರಸ್ತಿ ಮಾಡಿಕೊಳ್ಳಬೇಕಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ವಿದ್ಯುತ್ ಮೀಟರ್ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.
ಅದರ ಸದುಪಯೋಗ ಪಡೆದುಕೊಳ್ಳಬೇಕು. ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಗಿಡಗಂಟಿಗಳನ್ನು ತೆರವು ಮಾಡಬೇಕು. ಕುಡಿಯಲು ಯೋಗ್ಯವಿರುವ ಬೋರವೆಲ್ ಗಳ ನೀರನ್ನು ಮಾತ್ರ ಜನರಿಗೆ ಪೂರೈಸಬೇಕಾಗುತ್ತದೆ. ಹಳೆಯ ಬೋರವೆಲ್ ಮೋಟಾರ್ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರೀಶೀಲಿಸಬೇಕು. ಈಗಾಗಲೇ ಶಾಲೆಗಳು ಪ್ರಾರಂಭವಾಗಿರುವುರಿಂದ ಶಾಲಾ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೇ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಶೌಚಾಲಯ ದುರಸ್ತಿಗೆ ಕ್ರಮ ವಹಿಸಬೇಕಿದೆ. ತಿರುಮಲಕೊಪ್ಪದ ಅಂಗನವಾಡಿ ಕೇಂದ್ರವನ್ನು ತೆರವುಗೊಳಿಸಿ. ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಿ ಹೊಸ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 