ಸಂಪಗಾಂವಿ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ, ಪರೀಶಿಲನೆ
Officials visit Sampagaonvi Hospital, conduct inspection
ರಾಯಬಾಗ, 23 : ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಸೋಮವಾರ ಬೆಳಗಾವಿ ಜಿ.ಪಂ. ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಗವಿಮಠ ಮತ್ತು ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಆಸ್ಪತ್ರೆಯಲ್ಲಿರುವ ವಾಷಿಂಗ್ ಮಿಷನ್ ಸುಮಾರು ತಿಂಗಳಿನಿಂದ ಬಂದ ಇರುವುದನ್ನು ಕಂಡು ಮುಖ್ಯವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ವಾಷಿಂಗ್ ಮಿಷನ್ ನೀಡಿರುವ ಏಜೆನ್ಸಿ ಜೊತೆಗೆ ದೂರವಾಣಿಯಲ್ಲಿ ಮಾತನಾಡಿ, ಶೀಘ್ರವಾಗಿ ಮಿಷನ್ ರಿಪೇರಿ ಮಾಡಿಕೊಡಬೇಕು, ಇಲ್ಲದಿದ್ದರೆ ತಮ್ಮ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸುವುದಾಗಿ ಎಚ್ಚರಿಸಿದರು.
ಆಸ್ಪತ್ರೆಯಲ್ಲಿರುವ ನೂನ್ಯತೆಯನ್ನು ಕಂಡ ಅಧಿಕಾರಿಗಳು, ಶೀಘ್ರವಾಗಿ ಎಲ್ಲವನ್ನು ಸರಿಪಡಿಸುವಂತೆ ಮತ್ತು ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಎಲ್ಲ ಘಟಕಗಳನ್ನು ವಿಕ್ಷೀಸಿ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ತಹಶೀಲ್ದಾರ ಸುರೇಶ ಮುಂಜೆ, ತಾ.ಪಂ.ಇಒ ಡಾ.ಸುರೇಶ ಕದ್ದು, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಮ್.ಪಾಟೀಲ, ಮುಖ್ಯವೈದ್ಯಾಧಿಕಾರಿ ಡಾ.ಆರ್.ಎಚ್.ರಂಗಣ್ಣನವರ ಹಾಗೂ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 