ಶಿರಹಟ್ಟಿ

ಹೊಳಲಾಪುರ ಕೆರೆ ಪುನಶ್ಚೇತನ ಕಾಮಗಾರಿಗೆ ಅಧಿಕಾರಿಗಳ ಭೇಟಿ ಪರೀಶೀಲನೆ

ಹೊಳಲಾಪುರ ಕೆರೆ ಪುನಶ್ಚೇತನ ಕಾಮಗಾರಿಗೆ ಅಧಿಕಾರಿಗಳ ಭೇಟಿ ಪರೀಶೀಲನೆ


ಶಿರಹಟ್ಟಿ 07 : ತಾಲೂಕಿನ ಮಾಗಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಳಲಾಪುರ ಗ್ರಾಮದ ಕೆರೆಯಲ್ಲಿ ವಿಬಿಜಿ-ರಾಮ್‌-ಜಿ ಯೋಜನೆಯಡಿ ಕೆರೆ ಪುನಶ್ಚೇತನಗೊಳಿಸುವ ಸಮುದಾಯ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮದ ಜಲಸಂಪನ್ಮೂಲ ಸಂರಕ್ಷಣೆ ಹಾಗೂ ಕೆರೆಯ ಪುನಶ್ಚೇತನಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ಕಾಮಗಾರಿಯ ಸ್ಥಳಕ್ಕೆ ತಾಲೂಕು ಪಂಚಾಯತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು.

ಕಾಮಗಾರಿಯ ಪ್ರಗತಿ, ಸ್ಥಳೀಯ ಅಗತ್ಯತೆ ಹಾಗೂ ಕೈಗೊಳ್ಳಲಾಗುತ್ತಿರುವ ಕಾಮಗಾರಿಯ ಗುಣಮಟ್ಟವನ್ನು ಪರೀಶೀಲಿಸಿ, ನಿಗದಿತ ಮಾನದಂಡಗಳಂತೆ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಹಾಯಕ, ಜಿ.ಕೆ.ಎಂ., ಕೂಲಿ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ