ಮತದಾರರ ಪಟ್ಟಿ ಶುದ್ಧತೆಗೆ ಅಧಿಕಾರಿಗಳ ಮನೆಮನೆ ಭೇಟಿ
Officials visit houses to ensure cleanliness of voter list
ಗದಗ 30: ವಿಶೇಷ ಸಾಂದ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸಲು ಅಧಿಕಾರಿಗಳು ಮನೆಮನೆ ಭೇಟಿ ಮೂಲಕ ಪರೀಶೀಲನೆ ನಡೆಸುತ್ತಿದ್ದಾರೆ.
ಜುಲೈ 6ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಮತದಾರರ ಹೆಸರು ಪರೀಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರೆ್ಡ ಹಾಗೂ ಅನರ್ಹ ಹೆಸರುಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. 2002ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಯುತ್ತಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಬೂತ್ ಮಟ್ಟದ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರು ತಮ್ಮ ಮತದಾರರ ವಿವರಗಳನ್ನು ಪರೀಶೀಲಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಮನವಿ ಮಾಡಲಾಗಿದೆ. ಪಾರದರ್ಶಕ ಮತ್ತು ವಿಶ್ವಾಸಾರ್ಹ ಮತದಾರ ಪಟ್ಟಿ ಸಿದ್ಧಪಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 