ಫೆ.20 ರಂದು ಸರ್ವಜ್ಞ ಜಯಂತಿ ಆಚರಣೆಗೆ ನಿಧರ್ಾರ

ಫೆ.20 ರಂದು ಸರ್ವಜ್ಞ ಜಯಂತಿ ಆಚರಣೆಗೆ ನಿಧರ್ಾರ

ಬಳ್ಳಾರಿ 07:ಸಂತ ಕವಿ ಸರ್ವಜ್ಞರ ಜಯಂತಿಯನ್ನು ಫೆ.20ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಿದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಯಂತಿ ಆಚರಣೆಯ ಅಂಗವಾಗಿ ಅಂದು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಂತ ಕವಿ ಸರ್ವಜ್ಞರ ಭಾವಚಿತ್ರದ ಭವ್ಯ ಮೆರವಣಿಗೆಯು ಬೆಳಗ್ಗೆ 9.30 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ, ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಜೈನ್ ಮಾಕರ್ೆಟ್, ಹೆಚ್.ಆರ್.ಜಿ ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಲಿದೆ. ವೇದಿಕೆ ಕಾರ್ಯಕ್ರಮ ಬೆಳಗ್ಗೆ 11:30ಕ್ಕೆ  ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗುವುದು.  ಸಂತ ಕವಿ ಸರ್ವಜ್ಞ ಅವರ ಕುರಿತ ಜೀವನ ಮತ್ತು ಸಾಧನೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಗಣ್ಯರು ಪಾಲ್ಗೊಂಡಿದ್ದರು.

 

ಸುದ್ದಿ ಓದಿ