ಜು.26 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ 24:ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ ಉಪ-ಕೇಂದ್ರದ ಆವರಣದಲ್ಲಿರುವ ಶಿಥಿಲಗೊಂಡ ಜೋಡಿ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಜು.26 ರಂದು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 110/11ಕೆ.ವಿ ಕುಡುತಿನಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ.*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು*:
ಎಫ್-6 ದರೋಜಿ ಐ.ಪಿ ಮಾರ್ಗದ ಏಳುಬೆಂಚಿ, ಸಿದ್ದಮ್ಮನಹಳ್ಳಿ, ಯರ್ರಂಗಳಿ, ಬಸವಣ್ಣ ಕ್ಯಾಂಪ್, ಭೂಲಕ್ಷ್ಮಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-2 ತಿಮ್ಮಲಾಪುರ ಎನ್.ಜೆ.ವೈ ಮಾರ್ಗದ ಸಿದ್ದಮ್ಮನಹಳ್ಳಿ ತಿಮ್ಮಲಾಪುರ, ಏಳುಬೆಂಜಿ, ಬಸವಣ್ಣ ಕ್ಯಾಂಪ್ ಗ್ರಾಮಗಳು.ಎಫ್-3 400 ಕೆಪಿಟಿಸಿಎಲ್ ಮತ್ತು ಬಿಪಿಎಸ್ ಮಾರ್ಗದ 400 ಕೆ.ವಿ.ಎ ಬಿ.ಪಿ.ಎಸ್ ಕುಡುತಿನಿ. ಎಫ್-4 ಕುಡುತಿನಿ ನಗರ ಮಾರ್ಗದ ಕುಡುತಿನಿ ನಗರ, ವೇಣಿವೀರಾಪುರ ಗ್ರಾಮಗಳು. ಎಫ್-5 ವೇಣಿ ವೀರಾಪುರ ಕೈಗಾರಿಕೆ ಪ್ರದೇಶ ಮಾರ್ಗದ ವೇಣಿವೀರಾಪುರ ಕೈಗಾರಿಕೆ ಪ್ರದೇಶ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.