ಜೂ.30 ರಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಬಳ್ಳಾರಿಗೆ
On June 30, the Chairman of the Minorities Commission, U. Nisar Ahmed, visited Ballari
ಬಳ್ಳಾರಿ 16: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು, ಜೂನ್ 30 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂ.30 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಹಿಂದುಳಿದ ಹಾಗೂ ಕೊಳಚೆ ಪ್ರದೇಶಗಳಲ್ಲಿರುವ ಅಂಗನವಾಡಿ ಮತ್ತು ಉರ್ದು ಶಾಲೆಗಳಿಗೆ ಅಧ್ಯಕ್ಷರು ಭೇಟಿ ನೀಡಿ ಪರೀಶೀಲಿಸುವರು. ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆಗಳ ವಿಚಾರಣಾ ಸಭೆ ನಡೆಸುವರು.ನಂತರ ಮಧ್ಯಾಹ್ನ 03 ಗಂಟೆಗೆ ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರೀಶೀಲನಾ ಸಭೆ ನಡೆಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 