28 ರಂದು ಡಾ. ಬಿ.ಆರ್‌. ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ

28 ರಂದು ಡಾ. ಬಿ.ಆರ್‌. ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ  On the 28th Dr. B.R. Ambedkar statue unveiling program

ಬೀದರ್ 27 : ದಕ್ಷಿಣ ಕ್ಷೇತ್ರದ ಹೊಚಕನಳ್ಳಿ ಗ್ರಾಮದಲ್ಲಿ ದಿನಾಂಕ 28 ರಂದು ಸಂಜೆ 4:30ಕ್ಕೆ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ಭವ್ಯವಾಗಿ ನಡೆಯಲಿದೆ.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಮೂರ್ತಿ ಅನಾವರಣ ನೆರವೇರಿಸಲಿದ್ದಾರೆ.

ಪೂಜ್ಯ ಭಂತೆ ರೇವತ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಪೂಜ್ಯ  ಡಾ. ಸಿದ್ದರಾಮ ಬೆಲ್ದಾರ ಶರಣರು ಉಪಸ್ಥಿತರಿರುವರು. ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಬಳಿಕ, ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಂಗಲಗಿ ಗ್ರಾಮದ ಮಾಜಿ ಎಪಿಎಂಸಿ ಅಧ್ಯಕ್ಷರಾದ ನಾರಾಯಣ ರೆಡ್ಡಿ ಮಂಗಲಗಿ ಅವರ ನಿವಾಸದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಸ್ಥಳೀಯ ಜನರ ಸಮಸ್ಯೆಗಳು, ಗ್ರಾಮಾಭಿವೃದ್ಧಿ, ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

 ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಸಾಧಿಸಿ ಅವರ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮಕ್ಕೆ ಎಲ್ಲ ಸಮಾಜದ ಮುಖಂಡರು, ಅಭಿಮಾನಿಗಳು, ಯುವಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ. ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ ಸಹಾಯಕ ನಾಗೇಶ ಸಿದ್ದಾ.