ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ: ಶಾಸಕ ಪಠಾಣ್
On-the-spot resolution of people's issues in Shiggaon constituency: MLA Pathan
ಶಿಗ್ಗಾಂವಿ, ಸೆ.6: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಪ್ರಜಾ ಸೇವೆ’ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಆಯೋಜಿಸಿದ್ದ ಪ್ರಜಾ ಸೇವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಶೇ.90ರಷ್ಟು ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಉಳಿದ ಶೇ.10ರಷ್ಟು ಮಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ, ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಬಗ್ಗೆಯೂ ಸಾರ್ವಜನಿಕರಲ್ಲಿ ಅನುಮಾನ ಮೂಡುವಂತಾಗುತ್ತದೆ ಎಂದರು.
ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಗುರುತಿಸಿ, ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವ ಉದ್ದೇಶದಿಂದ ಪ್ರಜಾ ಸೇವೆ ಕಾರ್ಯಕ್ರಮ ರೂಪಿಸಲಾಗಿದೆ. ಇದರ ಮೂಲಕ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಶಾಸಕರಾದ ಬಳಿಕ ಪ್ರತಿತಿಂಗಳು ಸುಮಾರು 20ರಿಂದ 25 ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದರು.
ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾ ಸೇವೆ ಕಾರ್ಯಕ್ರಮ ನಡೆಸುವಂತೆ ಸರ್ಕಾರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಮೂರನೇ ಶನಿವಾರ ಜಿಲ್ಲಾ ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಇದರ ಪೂರ್ವಭಾವಿಯಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡು ಇಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 