ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು: ಪ್ರೊ.ಎಂ.ಮುನಿರಾಜು
One can increase knowledge by making it a habit to read newspapers daily: Prof. M. Muniraju
ಬಳ್ಳಾರಿ 21: ಪತ್ರಿಕೋದ್ಯಮ ಎಂಬುದು ಜನರ ಜೀವನಾಡಿಯಂತಿದ್ದು, ಬದಲಾಗುತ್ತಿರುವ ಶಿಕ್ಷಣ ಕ್ರಮದಲ್ಲಿ ಕೌಶಲ್ಯ ಆಧಾರಿತ ತಾಂತ್ರಿಕ ಕಲಿಕೆಗೆ ಒತ್ತು ನೀಡಬೇಕು. ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಹೇಳಿದರು.
ಶುಕ್ರವಾರದಂದು ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.ಪತ್ರಿಕೋದ್ಯಮ ಶಿಕ್ಷಣ ಗಟ್ಟಿಗೊಳಿಸಲು ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಸುಸಜ್ಜಿತ ಸ್ಟುಡಿಯೋ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.ಕುಲಸಚಿವರಾದ ರುದ್ರೇಶ್ ಎಸ್.ಎನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಬರೆಯಬೇಕು. ಬರೆಯುವುದರಿಂದ ಬರವಣಿಗೆಯಲ್ಲಿನ ಲೋಪದೋಷಗಳು ಮನವರಿಕೆಯಾಗುತ್ತವೆ. ಇದರಿಂದ ಬರವಣಿಗೆಯ ಕೌಶಲ್ಯ ವೃದ್ಧಿಸುತ್ತದೆ. ಇದರ ಜೊತೆಗೆ ಮಾತನಾಡುವ ಕೌಶಲ್ಯವನ್ನು ಸಹ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ವರದಿಗಾರ ಹರಿಶಂಕರ್ ಜಿ.ಪಾಳ್ಯ ಅವರು ಮಾತನಾಡಿ, ತನಿಖಾ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳುವವರು ನಿರ್ಭೀತಿ ಮತ್ತು ಆಮೀಷಕ್ಕೆ ತುತ್ತಾಗದಂತೆ ಕೆಲಸ ಮಾಡುವುದು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಪತ್ರಿಕೋದ್ಯಮ ಎಂಬುದು ಹುಲಿಯ ಮೇಲಿನ ಸವಾರಿ ಇದ್ದಂತೆ. ಅಡ್ಡದಾರಿ ಹಿಡಿಯದೆ ನೈತಿಕ ಪತ್ರಿಕೋದ್ಯಮವನ್ನು ಅಂತರಾಳ ಮಾಡಿಕೊಂಡು ಕೆಲಸ ನಿರ್ವಹಿಸಿದಲ್ಲಿ ಯಾರ ಹಂಗಿಲ್ಲದೆ ಈ ಕ್ಷೇತ್ರದಲ್ಲಿ ಮುಂದುವರೆಯಬಹುದು ಎಂದು ತಿಳಿಸಿದರು.ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ರಾಕೇಶ್ ವಿ.ತಾಳಿಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಧನುಂಜಯ ಭಟ್ ಸ್ವಾಗತಿಸಿದರು. ಡಾ.ಜಯರಾಜ.ಹೆಚ್ ನಿರೂಪಿಸಿ ವಂದಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 