ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಏಕದಿನ ಧರಣಿ
One-day protest in Bengaluru demanding fulfillment of farmers' demands
ಲೋಕದರ್ಶನ ವರದಿ
ವಿಜಯಪುರ 20: ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಏಕದಿನ ಧರಣಿ ನಡೆಯಿತು.
ಧರಣಿ ಸ್ಥಳಕ್ಕೆ ಆಗಮಿಸಿದ ಸಣ್ಣ ನೀರಾವರಿ ಸಚಿವ ಡಾ. ಅಜಯಸಿಂಗ್ ಅವರು ರೈತರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿ, ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈತರ 12 ಪ್ರಮುಖ ಬೇಡಿಕೆಗಳನ್ನು ಸಚಿವರಿಗೆ ವಿವರಿಸಿ ಮನವಿ ಸಲ್ಲಿಸಿದರು. ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಕೃಷಿಗೆ ಸಮರ್ಕ ನೀರು, ಗುಣಮಟ್ಟದ ವಿದ್ಯುತ್ ಹಾಗೂ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ದರ ಒದಗಿಸಿದರೆ ರೈತರ ಸಾಲದ ಬಾಧೆ ಕಡಿಮೆಯಾಗಲಿದೆ ಎಂದು ಹೇಳಿದರು.
ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್ನಿಂದ 524.256 ಮೀಟರ್ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಹಾಗೂ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ಕೃಷಿ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ರೈತರ ಜಮೀನುಗಳಿಗೆ ತೆರಳಲು ಸರ್ವಿಸ್ ರಸ್ತೆ, ಫ್ಲೈಓವರ್ ಹಾಗೂ ಅಂಡರ್ಾಸ್ಗಳನ್ನು ನಿರ್ಮಿಸಬೇಕು. ಬೆಳಗಾವಿ-ಧಾರವಾಡ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಿದ ಬಳಿಕ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಲಾಯಿತು.
ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ಗ್ರಹಮಂಡಳಿ ಹಾಗೂ ಕೆಐಡಿಬಿ ಮೂಲಕ ರೈತರ ಭೂಮಿ ಖರೀದಿಸಿ ಸೂಕ್ತ ಪರಿಹಾರ ನೀಡದೆ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ಕೃಷಿ ಭೂಮಿಯನ್ನು ಹೊರತುಪಡಿಸಿ ಬಂಜರು ಭೂಮಿಯಲ್ಲಿ ನಿವೇಶನ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದರು.
ಧರಣಿಯಲ್ಲಿ ರಾಜ್ಯ ಉಪಾಧ್ಯಕ್ಷ ಉಳವಪ್ಪ ಒಡೆಯರ್, ರಾಜ್ಯ ಕಾರ್ಯಾಧ್ಯಕ್ಷ ಕೆ. ಚಿಕ್ಕಣ್ಣ, ಸಹ ಕಾರ್ಯದರ್ಶಿ ಪ್ರಕಾಶ್ ಎಚ್., ಪಾಂಡು ಹಾಟಿ, ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷೆ ನಿಂಗಮ್ಮ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 