ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ

ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ One dead, three seriously injured in horrific accident

ಬೆಳಗಾವಿ : ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

 ಸಂಕೇಶ್ವರ ಬಳಿ ಬೆಳ್ಳಂ ಬೆಳ್ಳಗ್ಗೆ ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

   ಮಹಾರಾಷ್ಟ್ರ ನೊಂದಣಿ ಹೊಂದಿರುವ ಈ ಕಾರು ಹಾಗೂ ಧಾರವಾಡ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೂವರಿಗೆ ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

   ಮೃತ ಹಾಗೂ ಗಾಯಗೊಂಡವರ ಹೆಸರು ಇನ್ನು ತಿಳಿದು ಬಂದಿಲ್ಲ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. 

   ಕಾರು ಅಪಘಾತದಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತ ಹಾಗೂ ಗಾಯಗೊಂಡವರನ್ನು ಕಾರಿನಿಂದ ಜಗ್ಗಿ ಹೊರತೆಗೆಯುವ ದೃಶ್ಯ ವು ಕಂಡವರ ಕರಳು ಹಿಂಡುವಂತೆ ಮಾಡಿದೆ.