ಬಳ್ಳಾರಿ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆನ್ ಲೈನ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆನ್ ಲೈನ್ ಪ್ರತಿಭಟನೆ

ಬಳ್ಳಾರಿ 14: ಖಗಅಋ (ಅ) ಪಕ್ಷದ ವತಿಯಿಂದ ದಿ. 14ರಂದು ಕೋವಿಡ್ ಸಂಕಷ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೇ, ವಿದ್ಯುತ್, ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಅಮಾನವೀಯ ನಡೆಯನ್ನು ಖಂಡಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಆನ್ ಲೈನ್ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಬೇಡಿಕೆಗಳ ಫಲಕ ಇಡಿದು ಫೋಟೋ ತೆಗೆದು ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದರ ಮೂಲಕ ಆನ್ ಲೈನ್ ಹೋರಾಟದಲ್ಲಿ ಪಕ್ಷದ ಹಿತೈಸಿಗಳು, ಬೆಂಬಲಿಗರು ಮತ್ತು ಬಳ್ಳಾರಿ ಜಿಲ್ಲೆಯಾದ್ಯಂತ ಜನತೆ ಭಾಗವಹಿಸಿದ್ದರು. 

ಪ್ರತಿಭಟನೆಯ ಉದ್ದೇಶಿಸಿ ಖಗಅಋ (ಅ) ಪಕ್ಷದ ರಾಜ್ಯ ಸೆಕ್ರೆಟರಿಯೆಟ್ ಸದಸ್ಯ ಕಾಮ್ರೇಡ್ ಕೆ.ಸೋಮಶೇಖರ್ ಅವರು ಮಾತನಾಡುತ್ತಾ ಈ ಕೋರನಾ ಸಂಕಷ್ಟ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ನೂರರ ಗಡಿ ದಾಟಿದ್ದು, ದುಡಿಮೆ ಇಲ್ಲದೆ, ಆದಾಯವಿಲ್ಲದೆ, ನರಳುತ್ತಿರುವ ಸಾಮಾನ್ಯ ಜನತೆ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ ಮುಂತಾದ ಜನರಿಗೆ ಕನಿಷ್ಠ ಬೇಕಾಗಿರುವ ಅಗತ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಗಗನಕ್ಕೆರುತ್ತಿವೆ. ಆದ್ದರಿಂದ  ಜನತೆ ಹೋರಾಟದ ಹಾದಿಯನ್ನು ಹಿಡಿಯಬೇಕು ಎಂದು ಕರೆ ನೀಡಿದರು. 

ಖಗಅಋ (ಅ) ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಕಾಮ್ರೇಡ್ ರಾಧಾಕೃಷ್ಣ ಉಪಾದ್ಯ ಅವರು ಮಾತನಾಡುತ್ತಾ ರಾಜ್ಯದಲ್ಲಿ ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ವಿದ್ಯುತ್ ದರ ಏರಿಕೆ ಮಾಡಿರುವ ತೀರ್ಮಾನವನ್ನು ಎಸ್‌.ಯು.ಸಿ.ಐ ಕಮ್ಯುನಿಸ್ಟ್‌ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಪ್ರತಿ ಯೂನಿಟ್ ಗೆ ಸರಾಸರಿ 30 ಪೈಸೆಯಂತೆ ಏರಿಕೆ ಮಾಡಲಾಗಿದೆ. ಜೊತೆಗೆ ನಿಗದಿತ ಠೇವಣಿ ಮೊತ್ತವನ್ನೂ ಏರಿಕೆ ಮಾಡಲಾಗಿದೆ. ಬೇರೆ ಕೆಲವು ರಾಜ್ಯಗಳಲ್ಲಿ ವಿದ್ಯುತ್, ನೀರಿನ ಶುಲ್ಕಗಳ ಪಾವತಿಯನ್ನು ರದ್ದುಗೊಳಿಸಿದ ಅಥವಾ ಮುಂದೂಡಿದ ನಿದರ್ಶನಗಳಿರುವಾಗ, ನಮ್ಮ ರಾಜ್ಯದಲ್ಲಿ ಪೂರ್ವಾನ್ವಯವಾಗುವಂತೆ ದರ ಏರಿಕೆ ಮಾಡಿರುವುದು ಖಂಡನೀಯ ಎಂದರು. 

ಈ ಸಂದರ್ಭದಲ್ಲಿ ಖಗಅಋ (ಅ) ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಆರ್‌.ಸೋಮಶೇಖರ್ ಗೌಡ, ಎಮ್‌.ಎನ್ ಮಂಜುಳಾ, ಎ.ದೇವದಾಸ್, ಡಿ.ನಾಗಲಕ್ಷ್ಮಿ, ಡಾ.ಎನ್ ಪ್ರಮೋದ್, ಎ.ಶಾಂತಾ ಮತ್ತಿತರರು ಭಾಗವಹಿಸಿದ್ದರು. 


ಸುದ್ದಿ ಓದಿ