ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ , ಹೋಟೆಲ್ ತೆರೆಯಿರಿ: ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಂಗಳೂರು, ಜೂನ್ 6, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.
ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರುಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 