ಬೆಳಗಾವಿಯ ಪೊಲೀಸ ಠಾಣೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ತೆರೆದ ಮನೆ ವಿನೂತನ ಕಾರ್ಯಕ್ರಮ

ಬೆಳಗಾವಿಯ ಪೊಲೀಸ ಠಾಣೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ತೆರೆದ ಮನೆ ವಿನೂತನ ಕಾರ್ಯಕ್ರಮ

ಬೆಳಗಾವಿ : ನಗರ ಪೊಲೀಸ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿನ ಎಲ್ಲ ಪೊಲೀಸ್ ಠಾಣೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ "ತೆರೆದ ಮನೆ" (Open House) ಎಂಬ ವಿನೂತನ ಕಾರ್ಯಕ್ರಮವನ್ನು ಗುರುವಾರ  ಹಮ್ಮಿಕೊಳ್ಳಲಾಯಿತು. ಅಲ್ಲದೆ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು. 

   ಗುರುವಾರ ದಿನದಂದು ಈ ಕಾರ್ಯಕ್ರಮ ಆಯೋಜಿಸುವ ಮೂಲಕ ಬೆಳಗಾವಿ ವ್ಯಾಪ್ತಿಯ ಎಲ್ಲ ಠಾಣೆ ಪೊಲೀಸ ಅಧಿಕಾರಿಗಳು ಶಾಲೆಗಳ ವಿದ್ಯಾರ್ಥಿಗಳನ್ನು ಠಾಣೆಗೆ ಬರ ಮಾಡಿಕೊಂಡು ಪೊಲೀಸ್ ಇಲಾಖೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಅಲ್ಲದೇ ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳ ಬಗ್ಗೆ ತಿಳಿಸಲಾಯಿತು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶೇಖರ ಟಿ ಅವರು ತಿಳಿಸಿದ್ದಾರೆ.


ಸುದ್ದಿ ಓದಿ