ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೀದಿ ನಾಯಿಗಳು, ಹಂದಿಗಳ ಸೆರೆ ಮತ್ತು ಸ್ಥಳಾಂತರ ಕಾರ್ಯಾಚರಣೆ

ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೀದಿ ನಾಯಿಗಳು, ಹಂದಿಗಳ ಸೆರೆ ಮತ್ತು ಸ್ಥಳಾಂತರ ಕಾರ್ಯಾಚರಣೆ  Operation to capture and relocate stray dogs and pigs in Lakshmeshwar town


ಲಕ್ಷ್ಮೇಶ್ವರ 19 : ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ಬೀದಿ ನಾಯಿಗಳು ಹಾಗೂ ಹಂದಿಗಳ ಹಾವಳಿ ನಿಯಂತ್ರಿಸಲು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಮತ್ತು ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಕಾರ್ಯಾಚರಣೆ ನಡೆಸಿದರು. ಮಂಗಳವಾರ ಆರಂಭವಾದ ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು, ಸಾರ್ವಜನಿಕರು ಪುರಸಭೆಯ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮತ್ತೆ ನಾಯಿಗಳು ಮತ್ತು ಹಂದಿಗಳ ಹಾವಳಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.