ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆಗೆ ಅವಕಾಶ
Opportunity to establish youth associations within the Rabakavi-Banahatti City Municipal Council lim
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 13: ನಗರದ ಯುವಕರು ಹಾಗೂ ಯುವತಿಯರಲ್ಲಿ ಕ್ರೀಡೆ, ಸಾಂಸ್ಕೃತಿಕ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ನಗರಗಳಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಗರದ 16ರಿಂದ 35 ವರ್ಷ ವಯೋಮಾನದ ಯುವಕರು ಹಾಗೂ ಯುವತಿಯರು ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಕನಿಷ್ಠ 100ರಿಂದ ಗರಿಷ್ಠ 250 ಯುವಕರನ್ನು ಒಳಗೊಂಡಂತೆ ನಗರದ ಆಯ್ದ ಪ್ರದೇಶಗಳಲ್ಲಿ ಯುವ ಸಂಘಗಳನ್ನು ರಚಿಸಬೇಕಾಗಿದೆ.
ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿಯೂ ಯುವ ಸಂಘಗಳನ್ನು ರಚಿಸಲು ಅವಕಾಶವಿದ್ದು, ಆಸಕ್ತ ಯುವಕರು ಹಾಗೂ ಯುವತಿಯರು ಃಎಙಖ ಪೋರ್ಟಲ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಆಧಾರ್ ಕಾರ್ಡೊಂದಿಗೆ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ರಬಕವಿ-ಬನಹಟ್ಟಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ಮಹಾಂತೇಶ ಬೀಳಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 