ವಿಪಕ್ಷಗಳ ಗದ್ದಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಿಕೆ
ನವದೆಹಲಿ, ನ 19 : ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ಜವಾಹರ್ ಲಾಲ್ ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ವಿಷಯಗಳನ್ನು ಪ್ರಸ್ತಾಪಿಸಿ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಮಂಗಳವಾರದ ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲ್ಪಟ್ಟಿದೆ. ನಿಯಮ 267 ರ ಅಡಿ ಕೆಲವು ಸದಸ್ಯರು ನೊಟೀಸ್ ನೀಡಿದ್ದು ಅದನ್ನು ತಿರಸ್ಕರಿಸಲಾಗಿದೆ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಸಿ ಪಿ ಎಂ ಸದಸ್ಯರು ಗದ್ದಲ ಎಬ್ಬಿಸಿದರು. ಶಾಂತಿ ಕಾಪಾಡುವಂತೆ ವೆಂಕಯ್ಯನಾಯ್ಡು ಮಾಡಿದ ಮನವಿ ಫಲಿಸದ ಕಾರಣ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆವರೆಗೆ ಮುಂದೂಡಲಾಯಿತು. ದೇಶದಲ್ಲಿನ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದರೆ, ಜವಹಾರ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಸಂಬಂಧ ಚರ್ಚೆ ನಡೆಸುವಂತೆ ಸಿಪಿಎಮ್ ಆಗ್ರಹಪಡಿಸಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 