ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ
ರಾಮದುರ್ಗ 03: ಪಟ್ಟಣದ ಸಾಯಿರಾಮ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮಂಡಳ ಅಧ್ಯಕ್ಷ ಡಾ. ಕೆ.ವಿ. ಪಾಟೀಲ, ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ಪ್ರತಿದಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು. ಶಿಬಿರದಲ್ಲಿ ಕಿವಿ, ಮೂಗು, ಗಂಟಲು, ನರ ಹಾಗೂ ಮನೋರೋಗ, ಚರ್ಮರೋಗ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ವೈದ್ಯರಾದ ಡಾ. ಮಂಜುನಾಥ ಬಡಿಗೇರ್, ಡಾ. ಸಂಜನಾ ಪಾಟೀಲ, ಡಾ. ಭಾಗ್ಯಶ್ರೀ ಅಂಕದ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.