ಮಹಾದೇವಪ್ಪನವರಿಗೆ ಉನ್ನತ ಸ್ಥಾನಮಾನ ನೀಡುವಂತೆ ಸಂಘಟನೆಗಳು ಒತ್ತಾಯ
Organizations demand higher status for Mahadevappa
ತಾಳಿಕೋಟಿ 12: ರಾಜ್ಯ ಸರ್ಕಾರದಲ್ಲಿ ಹಿರಿಯ ದಲಿತ ನಾಯಕರದ ಹೆಚ್.ಸಿ. ಮಹದೇವಪ್ಪನವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಭಾರತೀಯ ಭೀಮಸೇನೆಯ ರಾಜ್ಯ ಉಪಾಧ್ಯಕ್ಷ ವಿಶ್ವನಾಥ್ ಶಾಂತಪ್ಪ ಚಲವಾದಿ ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಮುಖಂಡರು ಒತ್ತಾಯಿಸಿದ್ದಾರೆ. ಸಾಮಾಜಿಕ ನ್ಯಾಯ ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ:ಹೆಚ್. ಸಿ. ಮಹದೇವಪ್ಪ ನವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು.
ರಾಜ್ಯದ ದಲಿತ ಸಮುದಾಯದ ಆಶೋತ್ತರಗಳಗೆ ಧ್ವನಿಯಾಗಿರುವ ಮಹದೇವಪ್ಪ ಸಾಹೇಬರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಿದ್ದು , ಅವರ ನಾಯಕತ್ವ ಮತ್ತು ಆಡಳಿತ ಅನುಭವವನ್ನು ಪರಿಗಣಿಸಿ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವುದು ಸೂಕ್ತ. " ಸಾಮಾಜಿಕ ನ್ಯಾಯದ ಪರವಾಗಿ ನಿರಂತರ ಹೋರಾಟ ನಡೆಸಿರುವ ಡಾ"ಹೆಚ್ .ಸಿ. ಮಹದೇವಪ್ಪ ಅವರಿಗೆ ಸರ್ಕಾರದಲ್ಲಿ ಇನ್ನಷ್ಟು ಮಹತ್ವದ ಜವಾಬ್ದಾರಿ ನೀಡಬೇಕು, ಇದರಿಂದ ದಲಿತ ಸಮುದಾಯದ ಆಶಯಗಳಿಗೆ ಹೆಚ್ಚಿನ ಬಲ ದೊರೆಯಲಿದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 