ಬಳ್ಳಾರಿ

ಸಾರ್ವಜನಿಕರಿಗೆ ಜಾಗೃತಿ ನೀಡುವ ಮೂಲಕ ರಕ್ತದಾನ ಶಿಬಿರಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಿ: ಡಾ.ಯಲ್ಲಾ ರಮೇಶಬಾಬು

ಸಾರ್ವಜನಿಕರಿಗೆ ಜಾಗೃತಿ ನೀಡುವ ಮೂಲಕ ರಕ್ತದಾನ ಶಿಬಿರಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಿ: ಡಾ.ಯಲ್ಲಾ ರಮೇಶಬಾಬು

ಸಾರ್ವಜನಿಕರಿಗೆ ಜಾಗೃತಿ ನೀಡುವ ಮೂಲಕ ರಕ್ತದಾನ ಶಿಬಿರಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಿ: ಡಾ.ಯಲ್ಲಾ ರಮೇಶಬಾಬು 

ಬಳ್ಳಾರಿ 13 :ಅಪಘಾತ, ಗರ್ಭಿಣಿಯರಿಗೆ ಮತ್ತು ರಕ್ತಹೀನತೆಯಿಂದ ಬಳಲುವವರಿಗೆ ರಕ್ತದ ಅವಶ್ಯಕತೆಯಿದ್ದು, ತಕ್ಷಣದಲ್ಲಿ ರಕ್ತ ಪಡೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳನ್ನು ಜನತೆಯ ಮನವೊಲಿಸಿ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸುವಂತೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಸೂಚಿಸಿದರು. 

ಬುಧವಾರದಂದು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರಗಳ ಆಯೋಜನೆಯ ಕುರಿತು ಏರಿ​‍್ಡಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. 

ಜಿಲ್ಲಾಧಿಕಾರಿಗಳ ನೇರ ನಿಗಾವಣೆಯಲ್ಲಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ರಕ್ತದ ಮಹತ್ವವನ್ನು ತಿಳಿಸಿ ಶಿಬಿರಗಳನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.ಇತ್ತೀಚೆಗೆ ದೇವಿನಗರ ವ್ಯಾಪ್ತಿಯ ಬಸವರಾಜೇಶ್ವರಿ ಗ್ರೂಪ್ ಕಾಲೇಜಿನಲ್ಲಿ ಆಡಳಿತ ಮಂಡಳಿಯ ಸಹಕಾರದೊಂದಿಗೆ 72 ವಿದ್ಯಾರ್ಥಿಗಳು ರಕ್ತದಾನ ಮಾಡಿದ್ದಾರೆ. ನ.16 ರಂದು ಕುರುಗೋಡು ಪಟ್ಟಣದ ಸಂಘ-ಸಂಸ್ಥೆಗಳ ನೆರವಿನೊಂದಿಗೆ ರಕ್ತದಾನ ಶಿಬಿರ ಏರಿ​‍್ಡಸಲಾಗಿದೆ ಎಂದರು.ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ ಅವರು ಮಾತನಾಡಿ, ಕಳೆದ ತಿಂಗಳು ಸಿರಿಗೇರಿ ಗ್ರಾಮದಿಂದ ಹೆರಿಗೆಗಾಗಿ ವಿಮ್ಸ್‌ಗೆ ದಾಖಲಾದ ಗರ್ಭಿಣಿಗೆ 14 ಪಿಂಟ್ ರಕ್ತಪೂರಣ ಮಾಡಲಾಗಿತ್ತು. ಪ್ರತಿದಿನ ಅಪಘಾತಗಳಿಂದ ಗಾಯಗೊಂಡವರಿಗೆ ತೀವ್ರ ರಕ್ತಸ್ರಾವವಾದಾಗ ಹೆಚ್ಚಿನ ರಕ್ತದ ಅವಶ್ಯಕತೆಯಿದ್ದು, 18 ವರ್ಷ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಲು ಮುಂದೆ ಬರುವಂತೆ ಜಾಗೃತಿ ನೀಡಬೇಕಿದೆ ಎಂದರು.ಸಭೆಯಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಭರತ್ ಕುಮಾರ್, ಡಾ.ಅರುಣ್‌ಕುಮಾರ್, ಡಾ.ಮಂಜುನಾಥ ಜವಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎನ್‌ಸಿಡಿ ಸಲಹೆಗಾರರಾದ ಡಾ.ಜಬೀನ್ ತಾಜ್, ಡಾ.ಸುರೇಶಕುಮಾರ, ಡ್ಯಾಪ್ಕೋ ಮೇಲ್ವಿಚಾರಕ ಗೀರೀಶ್, ಡಾ.ಪ್ರಿಯಾಂಕ್, ಎಎಸ್‌ಓ ನಾಗಭೂಷಣ ಉಪಸ್ಥಿತರಿದ್ದರು. 


ಸುದ್ದಿ ಓದಿ