ನಿಯಂತ್ರಣ ತಪ್ಪಿದ ಕ್ಯಾಂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪಲ್ಟಿ
ಕೊಲ್ಹಾರ 28 : ಪಟ್ಟಣದಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಈರುಳ್ಳಿ ತುಂಬಿದ ಕ್ಯಾಂಟರ್ ವಾಹನ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಬಾಲಾಜಿ ವೈನ್ ಶಾಪ್ ಸಮೀಪದ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಏಂ-29 ಃ-6881 ಸಂಖ್ಯೆಯ ಕ್ಯಾಂಟರ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಅಪಘಾತದ ವೇಳೆ ವಾಹನದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಾಹನಕ್ಕೆ ಹಾನಿಯಾಗಿದ್ದು, ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕೊಲ್ಹಾರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.