ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
Outsourced employees protest demanding implementation of minimum wage
ಹಾವೇರಿ 24: ಕನಿಷ್ಠ ವೇತನ ಪರಿಷ್ಕರಣೆ, ಖಾಯಂಗೊಳಿಸುವಿಕೆ ಹಾಗೂ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಸಿಬ್ಬಂದಿ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ನಿಲಯ, ಶಾಲಾ-ಕಾಲೇಜುಗಳಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ನೌಕರರು, ಕಂಪ್ಯೂಟರ್ ಆಪರೇಟರ್ಗಳು, ಡೇಟಾ ಎಂಟ್ರಿ ಆಪರೇಟರ್ಗಳು ಹಾಗೂ ಹೊರಗುತ್ತಿಗೆ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 