ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿಯ ಅಮೋಘ ಸಾಧನೆ
Outstanding achievement of a student of Kittur Rani Channamma Residential School
ಲೋಕದರ್ಶನ ವರದಿ
ಗದಗ ಏಪ್ರಿಲ್ 27: ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಸುಷ್ಮಾ ತಾವರೇಪ್ಪ ನಾಯಕ, ಈ ವಿದ್ಯಾರ್ಥಿ 2026ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕಗಳಿಗೆ 620 ಅಂಕಗಳನ್ನು ಗಳಿಸಿ, ಶೇ 99.20 ಪ್ರತಿಶತ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನವನ್ನು ಪಡೆದು, ಸದರಿ ವಸತಿ ಶಾಲೆಗೆ ಹಾಗೂ ಇಲಾಖೆಗೆ ಕೀರ್ತಿ ತಂದಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ.ನಂದಾ ಹಣಬರಟ್ಟಿ ಇವರು ಸನ್ಮಾನಿಸಿದರು. ವಿದ್ಯಾರ್ಥಿನಿಯ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಅವರು ಇಂತಹ ಸಾಧನೆಗಳು ಎಲ್ಲ ವಸತಿ ಶಾಲೆಗಳಲ್ಲಿ ಮುಂದುವರೆಯಲಿ ಎಂದು ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯದ ಪ್ರಾಂಶುಪಾಲರಾದ ಶರಣಪ್ಪ ಕರ್ಜಗಿ, ವಿದ್ಯಾರ್ಥಿನಿಯ ಪಾಲಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 