ಲಾಕ್ಡೌನ್ ನಿಯಮ ಉಲ್ಲಂಘನೆ: 2 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು
ಮುಂಬೈ ಆಗಸ್ಟ್ 18: ಮಹಾರಾಷ್ಟ್ರದಲ್ಲಿ ಕರೋನಾ ಲಾಕ್ಡೌನ್ ನಿಯಮ, ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈವರೆಗೆ 2 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ರಾಜ್ಯ ಗೃಹ ಸಚಿವ ಅನಿಲ್ ದೇಶ್ ಮುಖ್ ಮಾಹಿತಿ ನೀಡಿದ್ದಾರೆ.
ಲಾಕ್ಡೌನ್ ಪ್ರಾರಂಭವಾದಾಗಿನಿಂದ ಈವರೆಗೆ ಭಾರತ ದಂಡ ಸಂಹಿತೆಯ ಸೆಕ್ಷನ್ 188 ಅಡಿಯಲ್ಲಿ ರಾಜ್ಯದಾದ್ಯಂತ ಇದೇ 17 ರವರೆಗೆ 2,ಲಕ್ಷದ 29ಸಾವಿರ ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದರು.
ಅವರ ಹೇಳಿಕೆಯ ಪ್ರಕಾರ, ಈವರೆಗೆ ರಾಜ್ಯದಲ್ಲಿ ವಿವಿಧ ಅಪರಾಧಗಳಿಗಾಗಿ 33,468 ಜನರನ್ನು ಬಂಧಿಸಲಾಗಿದೆ.ಆದೇಶ ಉಲ್ಲಂಘನೆಯಿಂದ 2.4 ಕೋಟಿ ರೂಪಾಯಿಗೂ ಹೆಚ್ಚಿನ ದಂಡ ವಿಧಿಸಲಾಗಿದೆ.ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗಾಗಿ ಒಟ್ಟು 7,55,645 ಪಾಸ್ ಗಳನ್ನು ನೀಡಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.