ರಾಷ್ಟ್ರೀಯ

ದೇಶದಲ್ಲಿ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 62 ಲಕ್ಷಕ್ಕೆ ಏರಿಕೆ

ದೇಶದಲ್ಲಿ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 62 ಲಕ್ಷಕ್ಕೆ ಏರಿಕೆ

ನವದೆಹಲಿ, ಸೆಪ್ಟೆಂಬರ್ 30: ದೇಶಾದ್ಯಂತ ಕಳೆದ 24 ತಾಸಿನಲ್ಲಿ 80,472 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 62 ಲಕ್ಷ ದಾಟಿದೆ.

ಇದೇ ಅವಧಿಯಲ್ಲಿ 1,179 ಸಾವು ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 97,497ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 1.57ರಷ್ಟಿದೆ.       

ಕೇಂದ್ರ ಆರೋಗ್ಯ ಸಚಿವಾಲಯದ ಬುಧವಾರದ ಮಾಹಿತಿಯಂತೆ, ಇದೇ ಅವಧಿಯಲ್ಲಿ ಸೋಂಕಿನಿಂದ 86,428  ಮಂದಿ ಚೇತರಿಸಿಕೊಂಡಿದ್ದು,  ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 51,87,825 ಕ್ಕೆ ಏರಿದೆ. ಸದ್ಯ, ಚೇತರಿಕೆ ಪ್ರಮಾಣ ಶೇ 83.33ಕ್ಕೆ ಏರಿದೆ. 

ಸದ್ಯ, 9,40,441 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 15.11ರಷ್ಟಿದೆ. 

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮಾಹಿತಿಯಂತೆ ಕಳೆದ 24 ತಾಸಿನಲ್ಲಿ 10,86,688 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಒಟ್ಟು ಪರೀಕ್ಷೆಗಳ ಸಂಖ್ಯೆ 7,41,96,729ಕ್ಕೆ ಏರಿದೆ. 

15,000ಕ್ಕೂ ಹೆಚ್ಚು ದೈನಂದಿನ ಪ್ರಕರಣಗಳು ಮಹಾರಾಷ್ಟ್ರದಿಂದ ವರದಿಯಾಗಿದ್ದು, ಕರ್ನಾಟಕದಲ್ಲಿ 10,000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. 

ಸುದ್ದಿ ಓದಿ