ಸತತ 14ನೇ ವರ್ಷ ಸಮಗ್ರ ವೀರಾಗ್ರಣಿ ಕೀರೀಟ: ಕ್ರೀಡಾಕ್ಷೇತ್ರದಲ್ಲಿ ಸಿ.ಕೆ. ಚಿಂಚಲಿ ಶಾಲೆಯ ಸಾಧನೆ
ಮಹಾಲಿಂಗಪುರ: ಕ್ರೀಡಾಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ನಗರದ ಸಿ.ಕೆ. ಚಿಂಚಲಿ ಶಾಲೆಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸತತ 14ನೇ ವರ್ಷವೂ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನ ಸೆಳೆದಿದೆ. ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ನಡೆದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಗುಂಪು ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು.
ಜಿಲ್ಲಾ ಮಟ್ಟಕ್ಕೆ ಆಯ್ಕೆ: ಪ್ರಾಥಮಿಕ ವಿಭಾಗದ ಬಾಲಕರ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. 14 ವರ್ಷದೊಳಗಿನ ಬಾಲಕರ ಶಟಲ್ ಬ್ಯಾಡ್ಮಿಂಟನ್ ತಂಡ ಹಾಗೂ 17 ವರ್ಷದೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. 14 ವರ್ಷದೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಂಡ ದ್ವಿತೀಯ ಸ್ಥಾನ ಗಳಿಸಿದೆ.